Bellary: ಐದು ವರ್ಷದ ಮಗುವಿನ ಅತ್ಯಾಚಾರ ನಡೆಸಿದ್ದ ಆರೋಪಿಗೆ ಗುಂಡೇಟು
Team Udayavani, Jan 16, 2025, 11:34 AM IST
ಬಳ್ಳಾರಿ: ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆಸಿದ್ದ ಆರೋಪಿಯು ತಪ್ಪಿಸಲೆತ್ನಿಸಿದಾಗ ಆತನ ಕಾಲಿಗೆ ಪೊಲೀಸರು ಫೈರಿಂಗ್ ನಡೆಸಿದ ಘಟನೆ ಗುರುವಾರ (ಜ.16) ಬೆಳಗ್ಗೆ ನಡೆದಿದೆ.
ಅತ್ಯಾಚಾರಿ ಆರೋಪಿ ಮಂಜುನಾಥ್ (26) ಎಂಬಾತನ ಮೇಲೆ ಫೈರಿಂಗ್ ನಡೆಸಲಾಗಿದೆ. ಬಲಗಾಲಿಗೆ ಗಾಯವಾಗಿದ್ದು, ಸದ್ಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಏನಿದು ಘಟನೆ?
ಕಳೆದ ಸೋಮವಾರ ತೋರಗಲ್ಲು ವ್ಯಾಪ್ತಿಯ ಗ್ರಾಮದಲ್ಲಿ ಐದು ವರ್ಷದ ಬಾಲಕಿಯ ಅತ್ಯಚಾರ ನಡೆದಿತ್ತು. ಅತ್ಯಾಚಾರದ ಬಳಿಕ ಆರೋಪಿಯು ಮಗುವನ್ನು ಪಾಳು ಮನೆಯಲ್ಲಿ ಮಗು ಬಿಟ್ಟು ಹೋಗಿದ್ದ.
ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಮೂರು ತಂಡ ರಚಿಸಿ ಆರೋಪಿಗಾಗಿ ಬಲೆ ಬೀಸಿದ್ದರು. ಕಮಲಾಪುರ ಮೂಲದ ಆರೋಪಿ ಮಂಜುನಾಥ್ ಕೊಪ್ಪಳದ ಹುಲಗಿಯಲ್ಲಿ ಪತ್ತೆಯಾಗಿದ್ದನು.
ಗುರುವಾರ ಬೆಳಗಿನ ಜಾವ ಸ್ಥಳ ಮಹಜರು ಮಾಡಿಸಲು ಹೋದಾಗ ತಪ್ಪಿಸಿಕೊಳ್ಳಲು ಆರೋಪಿ ಯತ್ನಿಸಿದ್ದಾನೆ. ಹೆಡ್ ಕಾನ್ಸಟೇಬಲ್ ರಘುಪತಿ ಮೇಲೆ ಹಲ್ಲೆ ಮಾಡಿ ತಪ್ಪಿಸಿಕೊಳ್ಳಲು ಯತ್ನ ಮಾಡಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಮುಂದಾಗಿದ್ದ ಮಂಜುನಾಥ ಮೇಲೆ ಪಿಎಸ್‌ಐ ಡಾಕೇಶ್ ಗುಂಡಿನ ದಾಳಿ ನಡೆಸಿದ್ದಾರೆ.
ಸೋಮವಾರ ಮಗುವಿಗೆ ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಲಾಗಿತ್ತು.ಸದ್ಯ ಅಪಾಯದಿಂದ ಪಾರಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uniform Civil Code: ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಅಸಾಧ್ಯ: ಡಿ.ಕೆ.ಶಿವಕುಮಾರ್
ಗುರಿ ಸಾಧಿಸದಿದ್ರೆ ಅಧಿಕಾರಿಗಳೇ ಹೊಣೆ: ಚಲುವರಾಯಸ್ವಾಮಿ
KAS ಹುದ್ದೆ ಭರ್ತಿಯಲ್ಲಿ ಲೋಪ: ಕೆಪಿಎಸ್‌ಸಿಗೆ ಕೆಎಟಿಯಿಂದ ನೋಟಿಸ್
Mallikarjun Kharge: ಕಲ್ಯಾಣ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿ 5 ಸಾವಿರ ನೀಡಿ
SSLC ಪ್ರವೇಶ ಪತ್ರ ತಿದ್ದುಪಡಿಗೆ ಫೆ.10ರವರೆಗೆ ಅವಕಾಶ