Advertisement

ತೆರಿಗೆ ವಿಚಾರದಲ್ಲಿ ಮುಸ್ಲಿಮರನ್ನು ಟೀಕಿಸಿದ ಆರೋಪ: ಬಿಜೆಪಿ ಮುಖಂಡ ಸೇರಿ ಇಬ್ಬರ ಸೆರೆ

11:49 AM Jul 28, 2024 | Team Udayavani |

ಕೆಜಿಎಫ್‌: ತೆರಿಗೆ ಕಟ್ಟುವ ವಿಚಾರದಲ್ಲಿ ಮುಸ್ಲಿಂ ಸಮುದಾಯವನ್ನು ಟೀಕಿಸಿ ಸಾಮಾಜಿಕ ಜಾಲತಾಣದಲ್ಲಿ ಭಿತ್ತಿ ಚಿತ್ರಗಳನ್ನು ಪೋಸ್ಟ್‌ ಮಾಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡ ಸೇರಿದಂತೆ ಇಬ್ಬರು ವ್ಯಕ್ತಿಗಳ ವಿರುದ್ಧ ರಾಬರ್ಟ್‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ನವೀನ್‌ ಜೈನ್‌, ಚೇತನ್‌ ಎಂಬುವವರ ವಿರುದ್ಧ ರಾಬರ್ಟ್‌ಸನ್‌ಪೇಟೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ ಎನ್ನಲಾಗಿದೆ.

ಮುಸ್ಲಿಂ ಸಮುದಾಯವನ್ನು ಟೀಕಿಸಿ ಕಾರ್ಟೂನ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಮಾಡಿದ್ದ ವಿಚಾರ ತಿಳಿಯುತ್ತಿದ್ದಂತೆ ಠಾಣೆ ಎದುರು ಮುಸ್ಲಿಂ ಮುಖಂಡರು ಜಮಾಯಿಸಿ ಪ್ರತಿಭಟಿಸಿದರು. ಪೊಲೀಸ್‌ ಅಧಿಕಾರಿಗಳು ಇಬ್ಬರನ್ನು ಬಂಧಿಸಿ ಕ್ರಮ ಜರುಗಿಸುವ ಭರವಸೆ ಬಳಿಕ ವಾಪಸ್‌ ಹೋಗಿದ್ದರು ಎನ್ನಲಾಗಿದೆ.

ರಾಬರ್ಟ್‌ಸನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next