Advertisement

ಅಕ್ರಮ ಡಿನೋಟಿಫಿಕೇಷನ್ ಆರೋಪ : HDKಗೆ ಮತ್ತೊಂದು ಸಂಕಷ್ಟ

09:26 AM Jul 21, 2019 | sudhir |

ಬೆಂಗಳೂರು : ಅಕ್ರಮ ಡಿನೋಟಿಫಿಕೇಷನ್ ಗೆ ಸಂಬಂಧಿಸಿ ಮುಖ್ಯಮಂತ್ರಿ ಹೆಚ್ ಡಿಕುಮಾರಸ್ವಾಮಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಬನಶಂಕರಿ ಬಡಾವಣೆಯಲ್ಲಿ ಸುಮಾರು ನಾಲ್ಕು ಎಕರೆ ಭೂಮಿಯನ್ನು ಡಿನೋಟಿಫಿಕೇಷನ್ ಮಾಡಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿ ಜನಪ್ರತಿನಿಧಿಗಳ ನ್ಯಾಯಾಲಯ ಮುಖ್ಯಮಂತ್ರಿ ಸೇರಿದಂತೆ ಒಟ್ಟು ಹತ್ತೊಂಬತ್ತು ಆರೋಪಿಗಳನ್ನು ವಿಚಾರಣೆ ನಡೆಸಲು ಆದೇಶ ಹೊರಡಿಸಿದೆ.

Advertisement

ಈ ಹಿಂದೆ (2006-2007) ರಲ್ಲಿ ಕುಮಾರಸ್ವಾಮಿಯವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಬನಶಂಕರಿ ಬಡಾವಣೆಯಲ್ಲಿ ಸುಮಾರು 4 ಎಕರೆ ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆಂದು ಚಾಮರಾಜನಗರ ಜಿಲ್ಲೆಯ ಸಂತೇಮರಳ್ಳಿಯ ಸಾಮಾಜಿಕ ಕಾರ್ಯಕರ್ತ ಎಂ. ಎಸ್. ಮಹದೇವಸ್ವಾಮಿ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ದೂರು ಸಲ್ಲಿಸಿದ್ದರು.

ಈ ಸಂಬಂಧ ವಿಚಾರಣೆ ನಡೆಸಿದ ನ್ಯಾಯಾಧೀಶ ರಾಮಚಂದ್ರ. ಡಿ . ಹೆಬ್ಬಾರ್ ಮುಖ್ಯಮಂತ್ರಿ ಸೇರಿದಂತೆ 19 ಜನ ಆರೋಪಿಗಳು ವಿಚಾರಣೆ ಒಳಗಾಗುವಂತೆ ಆದೇಶ ಹೊರಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next