Advertisement

Gadag; ಬಾಲಕಿ ಮೇಲೆ ಅತ್ಯಾಚಾರ ಪ್ರಕರಣದ ಆರೋಪಿಗೆ 20 ವರ್ಷ ಜೈಲು

05:42 PM Dec 08, 2023 | Team Udayavani |

ಗದಗ: ಬಾಲಕಿ ಮೇಲೆ ಅತ್ಯಾಚಾರ ಮಾಡಿದ ಆರೋಪ ಸಾಬೀತಾದ ಕಾರಣ ಆರೋಪಿಗೆ 20 ವರ್ಷ ಜೈಲು ಶಿಕ್ಷೆ ಹಾಗೂ 30,500 ರೂ ದಂಡ ವಿಧಿಸಿ ಗದಗ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಶುಕ್ರವಾರ ತೀರ್ಪು ಪ್ರಕಟಿಸಿದೆ.

Advertisement

ಪ್ರಕರಣದ ಆರೋಪಿ ಮಂಜುನಾಥ (32) ವಿರುದ್ಧ ನರಗುಂದ ಪೊಲೀಸ್‌ ಠಾಣೆಯಲ್ಲಿ 2019ರಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಪೊಲೀಸ್‌ ಇನ್ಸ್ ಪೆಕ್ಟರ್‌ ಡಿ.ಬಿ.ಪಾಟೀಲ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ನ್ಯಾಯಾಲಯದಲ್ಲಿ ಸಾಕ್ಷಿ ವಿಚಾರಣೆ ನಡೆದು, ಆರೋಪಿಯ ಅಪರಾಧ ರುಜುವಾತು ಆದ ಕಾರಣ ನ್ಯಾಯಾಧೀಶೆ ರಾಜೇಶ್ವರ ಶೆಟ್ಟಿ ಅವರು ಆರೋಪಿಗೆ 20 ವರ್ಷ ಜೈಲು ಹಾಗೂ ದಂಡ ವಿಧಿಸಿ ತೀರ್ಪು ಪ್ರಕಟಿಸಿದರು. ದಂಡದ ಹಣ ಕೊಡಲು ತಪ್ಪಿದಲ್ಲಿ ಹೆಚ್ಚುವರಿಯಾಗಿ ಎರಡು ವರ್ಷ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದ್ದಾರೆ.

ಸರ್ಕಾರದ ಪರವಾಗಿ ವಿಶೇಷ ಅಭಿಯೋಜಕ ಅಮರೇಶ ಉಮಾಪತಿ ಹಿರೇಮಠ ವಾದ ಮಂಡಿಸಿದ್ದರು

Advertisement

Udayavani is now on Telegram. Click here to join our channel and stay updated with the latest news.

Next