ಹುಣಸೂರು: ಅಂಧ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ಮೈಸೂರಿನ ಏಳನೇ ಅಧಿಕ ಮತ್ತು ಜಿಲ್ಲಾ ಸತ್ರ ನ್ಯಾಯಾಲಯವು 10 ವರ್ಷ ಕಠಿಣ ಸಜೆ, 20 ಸಾವಿರ ದಂಡ ವಿಧಿಸಿ ತೀರ್ಪು ನೀಡಿದೆ.
ಹುಣಸೂರು ತಾಲೂಕು ಬಿಳಿಕೆರೆ ಹೋಬಳಿಯ ಚೆಲುವರಾಜು (50) ಶಿಕ್ಷೆಗೊಳಗಾದ ಆರೋಪಿ.
2019ರ ಆ.16ರಂದು ಅಂಧ ಮಹಿಳೆ ಮನೆಯಲ್ಲಿ ಒಬ್ಬರೇ ಇದ್ದ ವೇಳೆ ಮನೆಗೆ ನುಗ್ಗಿ ಬಾಯಿಗೆ ಬಟ್ಟೆ ತುರುಕಿ ಲೈಂಗಿಕ ದೌರ್ಜನ್ಯ ನಡೆಸಿ ಯಾರಿಗಾದರೂ ತಿಳಿಸಿದರೇ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದ ಬಗ್ಗೆ ಸಂತ್ರಸ್ತೆಯ ಅತ್ತಿಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಅಂದಿನ ವೃತ್ತ ನಿರೀಕ್ಷಕ ಕೆ.ಸಿ.ಪೂವಯ್ಯ ತನಿಖೆ ನಡೆಸಿ ಆರೋಪಿ ಚೆಲುವರಾಜು ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ಸರ್ಕಾರಿ ಅಭಿಯೋಜಕ ಕೆ.ನಾಗರಾಜ್ ವಾದ ಮಂಡಿಸಿದ್ದರು.