Advertisement

ಮಡಿಕೇರಿ: ಆರೋಪಿಗಳ ಸಹಿತ ನಕ್ಷತ್ರ ಆಮೆಗಳು ವಶ

10:40 AM Jul 29, 2022 | Team Udayavani |

ಮಡಿಕೇರಿ: ಎರಡು ಜೀವಂತ ನಕ್ಷತ್ರ ಆಮೆಗಳನ್ನು ಅಕ್ರಮವಾಗಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಪ್ರಕರಣವನ್ನು ಬೇಧಿಸುವಲ್ಲಿ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕ ಯಶಸ್ವಿಯಾಗಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Advertisement

ಸುರೇಶ್ ಹಾಗೂ ಶರವಣನ್ ಬಂಧಿತ ಆರೋಪಿಗಳಾಗಿದ್ದು, ಎರಡು ನಕ್ಷತ್ರ ಆಮೆಗಳನ್ನು ವಶಕ್ಕೆ ಪಡೆಯಲಾಗಿದೆ.

ನಗರದ ಬಸ್ ತಂಗುದಾಣವೊಂದರ ಬಳಿ ಆಮೆಗಳನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿದ್ದ ಸಂದರ್ಭ ಪೊಲೀಸರು ದಾಳಿ ನಡೆಸಿದರು.

ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಮಾನ್ಯ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಕೆ.ವಿ.ಶರತ್ ಚಂದ್ರ ಅವರ ನಿರ್ದೇಶನದ ಮೇರೆಗೆ ಮಡಿಕೇರಿ ಸಿ.ಐ.ಡಿ ಪೊಲೀಸ್ ಅರಣ್ಯ ಘಟಕದ ಪ್ರಬಾರ ಪೊಲೀಸ್ ಅಧೀಕ್ಷಕ ಶ್ರೀನಿವಾಸ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಡಿಕೇರಿ ಅರಣ್ಯ ಸಂಚಾರಿ ದಳದ ಪಿ.ಎಸ್.ಐ ಸಿ.ಯು.ಸವಿ, ಹೆಡ್ ಕಾನ್ಸ್ಟೇಬಲ್ ಗಳಾದ ಶೇಖರ್, ರಾಜೇಶ್, ರಾಘವೇಂದ್ರ, ಯೋಗೇಶ್, ಮೋಹನ ಹಾಗೂ ಕಾನ್ಸ್ಟೇಬಲ್ ಮಂಜುನಾಥ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next