Advertisement

Assault case: 10 ವರ್ಷಗಳಿಂದ ಕೋರ್ಟ್‌ಗೆ ಗೈರಾಗಿದ್ದ ಆರೋಪಿ ಸೆರೆ

10:48 AM Jun 01, 2024 | Team Udayavani |

ಬೆಂಗಳೂರು: ಹಲ್ಲೆ ಪ್ರಕರಣದಲ್ಲಿ ಭಾಗಿಯಾಗಿ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ 10 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಹನುಮಂತನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಬನಶಂಕರಿಯ ಭವಾನಿ ನಗರ ನಿವಾಸಿ ಬಿ.ಆರ್‌. ನಟರಾಜ್‌ (51) ಬಂಧಿತ ಆರೋಪಿ. ಈತನ ವಿರುದ್ಧ 2014ರಲ್ಲಿ ಹಲ್ಲೆ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣದಲ್ಲಿ ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಆ ಬಳಿಕ ಜಾಮೀನು ಪಡೆದು ಬಿಡುಗಡೆಯಾಗಿದ್ದ ಆರೋಪಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಹೀಗಾಗಿ ಆರೋಪಿಯ ಬಂಧನಕ್ಕೆ ನ್ಯಾಯಾಲಯ ಹಲವು ಬಾರಿ ವಾರೆಂಟ್‌ ಜಾರಿ ಮಾಡಿತ್ತು. ಈ ಸಂಬಂಧ ಆರೋಪಿಯ ಬಂಧನಕ್ಕೆ ರಚಿಸಲಾಗಿದ್ದ ಪೊಲೀಸರ ವಿಶೇಷ ತಂಡಕ್ಕೆ ಇತ್ತೀಚೆಗೆ ಆರೋಪಿಯು ಚನ್ನಮ್ಮನಕೆರೆ ಅಚ್ಚುಕಟ್ಟು ಸಮೀಪದ ಗೌಡರಪಾಳ್ಯದ ದುರ್ಗಾಂಭ ದೇವಾಲಯದ ಬಳಿ ಬಂದಿದ್ದಾನೆ ಎಂಬ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಕ್ಷೀಪ್ರ ಕಾರ್ಯಾಚರಣೆ ನಡೆಸಿ ಬಂಧಿಸಿ, ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ ಎಂದು ಪೊಲೀಸರು ಹೇಳಿದರು.

ಹನುಮಂತನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

Advertisement
Advertisement

Udayavani is now on Telegram. Click here to join our channel and stay updated with the latest news.

Next