Advertisement

Arrested: ತಲೆಮರೆಸಿಕೊಂಡಿದ್ದ ಅತ್ಯಾಚಾರ ಆರೋಪಿ 9 ವರ್ಷ ಬಳಿಕ ಬಂಧನ

10:51 AM May 04, 2024 | Team Udayavani |

ಬೆಂಗಳೂರು: ಅತ್ಯಾಚಾರ ಮತ್ತು ಅಪಹರಣ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದೆ ಬರೋಬ್ಬರಿ 9 ವರ್ಷ ಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಸವನಗುಡಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

Advertisement

ಅವಲಹಳ್ಳಿಯ ತೌಸಿಫ್ ಅಲಿ ಖಾನ್‌(33) ಬಂಧಿತ.

ಆರೋಪಿ 2011ನೇ ಸಾಲಿನಲ್ಲಿ ಅಪಹರಣ ಹಾಗೂ ಅತ್ಯಾಚಾರ ಪ್ರಕರಣದಲ್ಲಿ ಭಾಗಿಯಾಗಿ ಬಂಧನಕ್ಕೊಳಗಾಗಿದ್ದ. ಬಳಿಕ ಜಾಮೀನು ಪಡೆದು ಬಿಡುಗಡೆಯಾದ ಬಳಿಕ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರಾಗದೆ 9 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ನ್ಯಾಯಾಲಯ ಆರೋಪಿಯ ಬಂಧನಕ್ಕೆ ವಾರೆಂಟ್‌ ಜಾರಿ ಮಾಡಿತ್ತು. ಈ ನಡುವೆ ಆರೋಪಿಯ ಬಂಧನಕ್ಕೆ ಬಸವನಗುಡಿ ಠಾಣೆ ಇನ್‌ಸ್ಪೆಕ್ಟರ್‌ ಸವಿತಾ ನೇತೃತ್ವದಲ್ಲಿ ವಿಶೇಷ ತಂಡ ರಚಿಸಲಾಗಿತ್ತು. ಈ ತಂಡ ಆರೋಪಿ ತೌಸಿಫ್ ಅಲಿ ಖಾನ್‌ ಕೆ.ಆರ್‌. ಪುರ ಸಮೀಪದ ಅವಲಹಳ್ಳಿ ಇರುವ ಬಗ್ಗೆ ಮಾಹಿತಿ ಸಂಗ್ರಹಿಸಿ, ಬಂಧಿಸಿ ಕೋರ್ಟ್‌ಗೆ ಹಾಜರಿಪಡಿಸಿದೆ ಎಂದು ಪೊಲೀಸರು ಮಾಹಿತಿ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next