ಮಂಡ್ಯ: ಕಾಂಗ್ರೆಸ್‌ನವರಿಗೆ ಬೇರೆ ಏನೂ ಕೆಲಸ ಇಲ್ಲ. ಆರೋಪ ಮಾಡಿಕೊಂಡೇ ರಾಜಕೀಯ ಮಾಡುತ್ತಾರೆ ಎಂದು ಸಚಿವ ಕೆ.ಸಿ.ನಾರಾಯಣ ಗೌಡ ಟೀಕಿಸಿದರು.
Advertisement
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಪರ್ಸನಲ್ ಡೇಟಾ ಕಲೆ ಹಾಕಿದ ಆರೋಪಕ್ಕೆ ಸಂಬಂಧಿ ಸಿ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನಾವು ನಮ್ಮ ಕೆಲಸ ಮಾಡುತ್ತಿದ್ದೇವೆ. ಇದಕ್ಕೆ ಮುಖ್ಯಮಂತ್ರಿ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದರು.
ಕಾಂಗ್ರೆಸ್‌ನವರು ನೂರಾರು ತಪ್ಪು ಮಾಡಿಲ್ವಾ? ಸರಕಾರ ನಡೆಸುವಂಥ ಸಂದರ್ಭದಲ್ಲಿ ಎಷ್ಟೋ ತಪ್ಪು ಮಾಡಿದ್ದಾರೆ. ಚಿಕ್ಕಪುಟ್ಟದ್ದಕ್ಕೆಲ್ಲ ಆರೋಪ ಮಾಡುವುದು ಸರಿಯಲ್ಲ ಎಂದು ಹೇಳಿದರು.