Advertisement

ಕಾರ್ಯದಲ್ಲಿ ಸಮನ್ವಯತೆ ಸಾಧಿಸಿ

03:19 PM Apr 21, 2020 | Suhan S |

ಬೈಲಹೊಂಗಲ: ಸೋಂಕು ತಡೆಗಟ್ಟಲು ಹಾಗೂ ನಿಯಂತ್ರಿಸಲು ಎಲ್ಲಾ ಟಾಸ್ಕ್ಪೋರ್ಸ್‌ ಸಮಿತಿಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.

Advertisement

ಪಟ್ಟಣದ ತಾಪಂ ಸಭಾಭವನದಲ್ಲಿ ಸೋಮವಾರ ನಡೆದ ಇಲಾಖೆ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊವೀಡ್‌-19 ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಅಧಿಕವಾಗುತ್ತಿದೆ. ಜಿಲ್ಲೆಯ ಜನತೆ ಎಚ್ಚೆತ್ತುಕೊಳ್ಳಬೇಕಾಗಿದೆ. ಅದಕ್ಕಾಗಿ ಗ್ರಾಮ,ತಾಲೂಕು, ಜಿಲ್ಲಾಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್ ಪೋರ್ಸ್‌ ಸಮಿತಿಗಳ ಅಧಿಕಾರಿಗಳು ಸೋಂಕಿನ ಕುರಿತು ಜಾಗೃತಿ ಮೂಡಿಸುವ ಮೂಲಕ ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು ಎಂದರು.

ತಾಲೂಕಿನ ಜನತೆಯಲ್ಲಿ ಸೋಂಕಿನ ಕುರಿತು ಜಾಗೃತಿ ಮೂಡಿಸಲು ಹಾಗೂ ಸೋಂಕಿನ ಲಕ್ಷಣಗಳು ಕಂಡು ಬಂದಾಗ ಆಶಾ ಕಾರ್ಯಕರ್ತೆಯರು, ಆರೋಗ್ಯಾಧಿಕಾರಿ ಸಿಬ್ಬಂದಿಗಳ ಸಹಕಾರದೊಂದಿಗೆ ಮನೆ-ಮನೆಗೆ ತೆರಳಿ ದಿನದ ಮಾಹಿತಿ ಕಲೆಹಾಕುವಂತೆ ಸಲಹೆ ನೀಡಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಮಹಾಂತೇಶ ದೊಡಗೌಡ್ರ ಹಾಗೂ ಮಹಾಂತೇಶ ಕೌಜಲಗಿ ಅವರು ಕೊವೀಡ್‌-19  ಟಾಸ್ಕ್ಪೋರ್ಸ್‌ ಸಮಿತಿಗೆ ಅಭಿನಂದನಾ ಪತ್ರ ನೀಡಿದರು. ಶಾಸಕರಾದ ಮಹಾಂತೇಶ ಕೌಜಲಗಿ, ಮಹಾಂತೇಶ ದೊಡಗೌಡ್ರ, ಡಿವೈಎಸ್‌ಪಿ ಕರುಣಾಕರ ಶೆಟ್ಟಿ, ಸಿಪಿಐ ಮಂಜುನಾಥ್‌ ಕುಸುಗಲ್‌, ಉಪವಿಭಾಗಾ ಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ್‌ ದೊಡ್ಡಪ್ಪ ಹೂಗಾರ, ತಾಪಂ ಅಧಿಕಾರಿ ಸಮೀರ ಮುಲ್ಲಾ, ಪಿಎಸ್‌ಐ ಎಂ.ಎಸ್‌. ಹೂಗಾರ, ತಾಲೂಕು ಮಟ್ಟದ ಎಲ್ಲ ಅಧಿಕಾರಿಗಳು, ನೇಸರಗಿ, ದೊಡವಾಡ ಪಿಎಸ್‌ಐ ಹಾಗೂ ಸಿಬ್ಬಂದಿ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next