Advertisement

ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಲಿ: ಪ್ರೇಮಾ

05:21 PM Sep 09, 2018 | Team Udayavani |

ಬೆಳಗಾವಿ: ಪೈಪೋಟಿಯ ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳು ಮೌಲ್ಯಯುತ ಶಿಕ್ಷಣ ಪಡೆಯುವುದರೊಂದಿಗೆ ಭಾರತೀಯ ಸಂಸ್ಕೃತಿಯನ್ನು ಉಳಿಸಿ ಬೆಳೆಸಬೇಕು ಎಂದು ಚಿತ್ರನಟಿ ಪ್ರೇಮಾ ಕರೆ ನೀಡಿದರು. ನಗರದ ನಾಯ್ಕರ ಶಿಕ್ಷಣ ಸಂಸ್ಥೆಯ ರವೀಂದ್ರನಾಥ ಠಾಗೋರ ಪದವಿ ಪೂರ್ವ ವಿಜ್ಞಾನ ಮತ್ತು ವಾಣಿಜ್ಯ ಮಹಾವಿದ್ಯಾಲಯದ ಆಶ್ರಯದಲ್ಲಿ ಶನಿವಾರ ಜಿಲ್ಲೆಯ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಲಕ್ಷ್ಯ -2018 ಸಾಂಸ್ಕೃತಿಕ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೀವನದಲ್ಲಿ ನೂರಾರು ಕಷ್ಟಗಳು ಬರುತ್ತವೆ. ಅವುಗಳನ್ನೆಲ್ಲ ಬದಿಗೊತ್ತಿ ಸಾಧನೆಯೊಂದೇ ವಿದ್ಯಾರ್ಥಿಗಳ ಗುರಿಯಾಗಬೇಕು.

Advertisement

ಗುರಿ ಸಾಧನೆಗೆ ಯೋಗವನ್ನು ಆಳವಡಿಸಿಕೊಳ್ಳುವುದು ಉತ್ತಮ ಮಾರ್ಗವಾಗಿದೆ. ಮಕ್ಕಳು ಸದಭಿರುಚಿಗೆ ತಕ್ಕಂತೆ ಶಿಕ್ಷಣ ಮಾರ್ಗ ಆಯ್ಕೆ ಮಾಡಿಕೊಳ್ಳಲು ಪಾಲಕರು ಪ್ರಯತ್ನಿಸಬೇಕು ಎಂದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ| ಸಿ.ಎನ್‌.ನಾಯ್ಕರ ಮಾತನಾಡಿ, ಸಂಸ್ಥೆಯ ಧ್ಯೇಯ ಹಾಗೂ ಉದ್ದೇಶಗಳ ಬಗ್ಗೆ ವಿವರಿಸಿದರು. ಲಕ್ಷ್ಯ-2018 ಸಾಂಸ್ಕೃತಿಕ ಕಾರ್ಯಕ್ರಮವಲ್ಲ. ಇದೊಂದು ಸಾಂಸ್ಕೃತಿಕ ಜಾತ್ರೆಯಾಗಿದ್ದು, ಸುಮಾರು 63 ಶಾಲೆಗಳ ವಿದ್ಯಾರ್ಥಿಗಳು ಭಾಗಿಯಾಗಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಶ್ಯಾಮ ಘಾಟಗೆ, ಜಿಪಂ ಅಧ್ಯಕ್ಷ ಆಶಾ ಐಹೊಳೆ ಹಾಗೂ ನಾಯ್ಕರ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಶ್ವೇತಾ ನಾಯ್ಕರ ಉಪಸ್ಥಿತರಿದ್ದರು. ಸೃತಿ ಮತ್ತು ಚೈತ್ರಾ ನಿರೂಪಿಸಿದರು. ಹೃತುರಾಜ ವಂದಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next