Advertisement
ಮಹಿಳೆ 12 ವರ್ಷಗಳಿಂದ ನರ ದೌರ್ಬಲ್ಯದಿಂದ ಬಳಲುತ್ತಿದ್ದರು. ಕೈಕಾಲುಗಳಲ್ಲಿ ನಡುಕ, ಬಿಗಿತ ಮತ್ತು ನಿಧಾನಗತಿ ಕಾರಣದಿಂದ ದೈನಂದಿನ ಚಟುವಟಿಕೆಗಳನ್ನು ನಿರ್ವಹಿಸಲು ಸಮಸ್ಯೆಯಾಗಿತ್ತು. ನರಶಸ್ತ್ರ ಚಿಕಿತ್ಸಾ ವಿಭಾಗದ ಮುಖ್ಯಸ್ಥ ಡಾ| ಗಿರೀಶ್ ಮೆನನ್, ನರವಿಜ್ಞಾನ ವಿಭಾಗದ ಮುಖ್ಯಸ್ಥೆ ಡಾ| ಅಪರ್ಣಾ ಪೈ, ನರವಿಜ್ಞಾನ ವಿಭಾಗದ ಸಹ ಪ್ರಾಧ್ಯಾಪಕ ಡಾ| ದುಷ್ಯಂತ್ ಬಾಬು ಮತ್ತು ನರಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ| ಅಜಯ್ ಹೆಗ್ಡೆ ಅವರ ತಂಡ ಸಮಗ್ರ ಮೌಲ್ಯಮಾಪನ ನಡೆಸಿ, ರೋಗಿಯನ್ನು ಹತ್ತು ಗಂಟೆಗಳ ಶಸ್ತ್ರಚಿಕಿತ್ಸೆಗೆ ಒಳಪಡಿಸಿತು.
ಯೊಂದಿಗೆ ಉತ್ತಮ ಜೀವನ ನಡೆಸಲು ಸಾಧ್ಯವಾಗಿದೆ. ಕಳೆದ 5-6 ವರ್ಷಗಳಿಂದ ಸೇವಿಸುತ್ತಿದ್ದ ಔಷಧಗಳನ್ನು ಶೇ. 60ರಷ್ಟು ಕಡಿಮೆ ಮಾಡಲು ಮತ್ತು ದೈನಂದಿನ ಚಟು ವಟಿಕೆಗಳನ್ನು ನಿರ್ವಹಿಸಲು ಮಹಿಳೆ ಈಗ ಶಕ್ತಳಾಗಿದ್ದಾರೆ. ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್ ಶೆಟ್ಟಿ, ಅಪರೂಪದ ಮತ್ತು ಸಂಕೀರ್ಣವಾದ ಶಸ್ತ್ರಚಿಕಿತ್ಸೆಯನ್ನು ಯಶಸ್ವಿ ಯಾಗಿ ಮಾಡಿದ ವೈದ್ಯರ ಕಾರ್ಯಕ್ಕೆ ಹರ್ಷ ವ್ಯಕ್ತಪಡಿಸಿದರು.
Related Articles
Advertisement