Advertisement
ಬೆಂಗಳೂರಿನಲ್ಲಿ ಆರ್ಮಿ ಡಿಸೈನ್ ಬ್ಯೂರೋದ ರೀಜಿನಲ್ ಟೆಕ್ನಾಲಜಿ ನೋಡ್ (ಆರ್‌ಟಿಎನ್) ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
Related Articles
Advertisement
ಇದನ್ನೂ ಓದಿ:ಶೇರು ವೆಡ್ಸ್ ಸ್ವೀಟಿ: ಮಕ್ಕಳಿಲ್ಲದ ದಂಪತಿಯಿಂದ ಮಗಳಂತೆ ಸಾಕಿದ ನಾಯಿಯ ಅದ್ಧೂರಿ ಮದುವೆ.!
ಕೋವಿಡ್ ಸಾಂಕ್ರಾಮಿಕದ ನಂತರ ಆರ್ಥಿಕತೆಯ ಪ್ರಗತಿಗೆ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ರಾಜ್ಯ ಸರ್ಕಾರ ಆಯೋಜಿಸಿದ್ದು, 9.5 ಲಕ್ಷ ಕೋಟಿ ಹೂಡಿಕೆಗೆ ಒಪ್ಪಂದಗಳು ನಡೆದಿವೆ. ಹೂಡಿಕೆಯ ವಿಚಾರದಲ್ಲಿ ಈ ಮಟ್ಟಿಗೆ ಉದ್ಯಮಿಗಳ ವಿಶ್ವಾಸವನ್ನು ರಾಜ್ಯ ಗಳಿಸಿದೆ ಎಂದರು.
ಭಾರತೀಯ ಸೇನೆಯ ಯಾವುದೇ ಕಾರ್ಯಕ್ರಮ, ಯೋಜನೆಗಳಿಗೆ ಕರ್ನಾಟಕ ಸರ್ಕಾರ ಸಂಪೂರ್ಣ ಸಹಕಾರ ನೀಡಲಿದೆ. ಬೆಂಗಳೂರಿನಲ್ಲಿ ಭಾರತೀಯ ಸೇನೆಯ ರೀಜಿನಲ್ ಟೆಕ್ನಾಲಜಿ ನೋಡ್ ಸ್ಥಾಪನೆ ಮಾಡಿರುವ ಭಾರತೀಯ ಸೇನೆಯ ನಡೆ ಅತ್ಯಂತ ಸ್ವಾಗತಾರ್ಹವಾಗಿದ್ದು, ಇದು ನವೋದ್ಯಮ, ಎಂಎಸ್‌ಎಂಇ ಮೊದಲಾದವುಗಳಿಗೆ ಹೊಸ ಅವಕಾಶಗಳನ್ನು ನೀಡಲಿದೆ. ರಾಜ್ಯ ಸರ್ಕಾರವು ʼಏರೋಸ್ಪೇಸ್ ಮತ್ತು ಡಿಫೆನ್ಸ್ ನೀತಿ 2022-2027ʼ ಜಾರಿಗೊಳಿಸುತ್ತಿರುವ ಕಾಲದಲ್ಲೇ ಆರ್‌ಟಿಎನ್ ಆರಂಭವಾಗುತ್ತಿದೆ. ರಕ್ಷಣಾ ವಲಯದ ಆಧುನೀಕರಣ, ರಕ್ಷಣಾ ಕ್ಷೇತ್ರದಲ್ಲಿ ಆಮದು ಇಳಿಕೆ ಹಾಗೂ ರಫ್ತು ಉತ್ತೇಜನದಲ್ಲಿ ಕರ್ನಾಟಕ ಮುಖ್ಯ ಪಾತ್ರ ವಹಿಸಲು ಈ ಕ್ರಮಗಳು ಕಾರಣವಾಗಲಿದೆ. ಈ ಮೂಲಕ ಆತ್ಮನಿರ್ಭರ ಭಾರತವನ್ನು ಸಾಧಿಸಬಹುದಾಗಿದೆ ಎಂದರು.
ಕನ್ನಡಿಗರೇ ಆದ ಲೆಫ್ಟಿನೆಂಟ್ ಜನರಲ್ ಬಿ.ಎಸ್.ರಾಜು ಹಾಗೂ ಲೆಫ್ಟಿನೆಂಟ್ ಕರ್ನಲ್ ಬಿ.ಕೆ.ರೆಪ್ಸ್‌ವಾಲ್ ಅವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಆರ್‌ಟಿಎನ್ ಆರಂಭವಾಗಿದೆ. ಬೆಂಗಳೂರು ತಂತ್ರಜ್ಞಾನದ ರಾಜಧಾನಿ, ನವೋದ್ಯಮಗಳ ಕೇಂದ್ರವಾಗಿದ್ದು, ಇಲ್ಲಿ ಆರ್‌ಟಿಎನ್‌ಗೆ ಪೂರಕ ವಾತಾವರಣವಿದೆ. ಈ ಕೇಂದ್ರದಿಂದ ಪ್ರಧಾನಿ ನರೇಂದ್ರ ಮೋದಿಯವರ ಆತ್ಮನಿರ್ಭರ ಭಾರತ ಪರಿಕಲ್ಪನೆ ಸಾಕಾರವಾಗಲಿದೆ. ಸೇನೆಗೆ ಬೇಕಾದ ಎಲ್ಲಾ ತಂತ್ರಜ್ಞಾನ, ಉಪಕರಣಗಳನ್ನು ಭಾರತೀಯರೇ, ಭಾರತದಲ್ಲೇ ಅದರಲ್ಲೂ ಬೆಂಗಳೂರಿನಲ್ಲಿ ತಯಾರಿಸುವ ಕೆಲಸವನ್ನು ಸೇನೆ ಮಾಡುತ್ತಿದೆ. ಇದಕ್ಕಾಗಿ ರಾಜ್ಯ ಸರ್ಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಪರವಾಗಿ ತುಂಬು ಹೃದಯದ ಅಭಿನಂದನೆ ತಿಳಿಸುತ್ತೇನೆ ಎಂದು ಸಚಿವ ಡಾ.ಕೆ.ಸುಧಾಕರ್ ಹೇಳಿದರು.