ಮುಂಬಯಿ, ಡಿ. 11: ವೆಸ್ಟರ್ನ್ ಇಂಡಿಯಾ ಶ್ರೀ ಶನಿಮಹಾತ್ಮಾ ಸೇವಾ ಸಮಿತಿಯ ಅಮೃತ ಮಹೋತ್ಸವದ ಸಮಾರೋಪ ಸಮಾರಂಭವು ಡಿ. 8ರಂದು ಸಂಜೆ ಸಾಂತಾಕ್ರೂಜ್‌ನ ಬಿಲ್ಲವರ ಭವನದ ಶ್ರೀ ನಾರಾಯಣ ಗುರು ಸಭಾಗೃಹದಲ್ಲಿ ನಿರ್ಮಿಸಿರುವ ನಾರಾಯಣ ಸಾಲ್ಯಾನ್ ಸ್ಮರಣಾರ್ಥ ವೇದಿಕೆಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ನಡೆಯಿತು.
ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮಾ ಸೇವಾ ಸಮಿತಿಯ ಗೌರವಾಧ್ಯಕ್ಷ ಹರೀಶ್ ಜಿ. ಅಮೀನ್ ಸಭಾಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಜಲಜಾ ನಾರಾಯಣ ಸಾಲ್ಯಾನ್ ಮತ್ತು ಶಾರದಾ ಕೃಷ್ಣಪ್ಪ ಕೋಟ್ಯಾನ್, ಸಮಿತಿಯ ಅಧ್ಯಕ್ಷ ಜಗದೀಶ್ ಜೆ. ಕೋಟ್ಯಾನ್ ಮತ್ತು ಗುಲಾಬಿ ಜಗದೀಶ್, ಗೌರವಾಧ್ಯಕ್ಷ ಹರೀಶ್ ಅಮೀನ್ ಮತ್ತು ಮೊನಿತಾ ಹರೀಶ್ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಹೊದೆಸಿ, ಫಲಪುಷ್ಪ, ಸ್ಮರಣಿಕೆಯನ್ನಿತ್ತು ಸಮ್ಮಾನಿಸಿ ಗೌರವಿಸಲಾಯಿತು.ಸಮಾರಂಭದಲ್ಲಿ ಉಪಸ್ಥಿತರಿದ್ದ ಸಮಿತಿಯ ಮಾಜಿ ಅಧ್ಯಕ್ಷರಾದ ಭೋಜ ಕೋಟ್ಯಾನ್, ಸತೀಶ ಕೋಟ್ಯಾನ್, ವಿಶ್ವನಾಥ ಕೋಟ್ಯಾನ್, ಸದಾನಂದ ಸುವರ್ಣ, ಕಾರ್ಯಕಾರಿ ಸಮಿತಿ ಸದಸ್ಯರು ಹಾಗೂ ಹಿರಿಯ ಸದಸ್ಯರು, ಗ್ರಂಥ ಪಾರಾಯಣ ವಾಚಕ ಮತ್ತು ಅರ್ಥಧಾರಿಗಳು ಮತ್ತು ವಿವಿಧ ಸಂಘ- ಸಂಸ್ಥೆಗಳ ಮುಖ್ಯಸ್ಥರನ್ನು ಹಾಗೂ ಕಲಾವಿದರನ್ನು ಗೌರವಿಸಲಾಯಿತು.
ಸಾಫಲ್ಯ ಸೇವಾ ಸಂಘ ಮುಂಬಯಿ ಅಧ್ಯಕ್ಷ ಶ್ರೀನಿ ವಾಸ ಪಿ. ಸಾಫಲ್ಯ, ವಾಸ್ತುತಜ್ಞ ಅಶೋಕ್ ಪುರೋ ಹಿತ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಅಧ್ಯಕ್ಷ ಚಂದ್ರಶೇಖರ್ ಎಸ್. ಪೂಜಾರಿ, ವಿಭಾಗದ ಕಾರ್ಯಾಧ್ಯಕ್ಷೆ ಜಯಂತಿ ವಿ. ಉಳ್ಳಾಲ್, ಸುಮಂಗಳಾ ಮೆನರೀಸ್ ಸಂಸ್ಥೆಯ ನಿರ್ದೇಶಕ ನಾರಾಯಣ ಆರ್. ಪೂಜಾರಿ, ಭಾರತ್ ಬ್ಯಾಂಕಿನ ನಿರ್ದೇಶಕ ಭಾಸ್ಕರ ಎಂ. ಸಾಲ್ಯಾನ್, ಬಿಲ್ಲವರ ಅಸೋಸಿಯೇಶನ್ ಕಲ್ವಾ ಸ್ಥಳೀಯ ಸಮಿತಿಯ ಉಪ ಕಾರ್ಯಾಧ್ಯಕ್ಷ ಹರೀಶ ಸಾಲ್ಯಾನ್ ಬಜಗೋಳಿ, ಮಕಾನಿ ರೋಯಲ್ ಇಂಡಿ ಯನ್ ಆರೋಮಾ ದುಬಾಯಿ ಕಾರ್ಯಾಧ್ಯಕ್ಷ ನವೀನ್ ಸುವರ್ಣ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಇದರ ಕಲ್ವಾ ಸ್ಥಳೀಯ ಸಮಿತಿಯ ಕಾರ್ಯಾಧ್ಯಕ್ಷ ನಾರಾಯಣ ಸುವರ್ಣ, ಅಮೃತ ಮಹೋತ್ಸವ ಸ್ಮರಣ ಸಂಚಿಕೆಯ ಕಾರ್ಯಾಧ್ಯಕ್ಷ ಪುರುಷೋತ್ತಮ ಎಸ್. ಕೋಟ್ಯಾನ್ ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದು ಶುಭ ಹಾರೈಸಿದರು. ಸೇವಾ ಸಮಿತಿಯ ಅಧ್ಯಕ್ಷ ಜಗದೀಶ್ ಜೆ. ಕೋಟ್ಯಾನ್ ಸ್ವಾಗತಿಸಿ ಪ್ರಸ್ತಾವಿಕ ನುಡಿಗಳನ್ನಾಡಿದರು. ಸೇವಾ ಸಮಿತಿಯ ಕಾರ್ಯದರ್ಶಿ ವಿಶ್ವನಾಥ್ ಭಂಡಾರಿ, ಕೋಶಾಧಿಕಾರಿ ಶರತ್ ಪೂಜಾರಿ, ಅಶೋಕ್ ಪುರೋಹಿತ್, ಹರೀಶ್ ಶೆಟ್ಟಿ, ಮೋಹನ್ ಪೂಜಾರಿ, ರವಿ ಬಂಗೇರ, ಜನಾರ್ದನ ಶೆಟ್ಟಿ, ವಾಸು ಸಾಲ್ಯಾನ್, ರಾಜೇಶ್ ಕೋಟ್ಯಾನ್, ಆಕಾಶ್ ಸುವರ್ಣ, ಪ್ರಶಾಂತ್ ಕೋಟ್ಯಾನ್ ಅವರು ಅತಿಥಿಗಳನ್ನು ಗೌರವಿಸಿದರು. ವಸಂತ್ ಎನ್. ಸುವರ್ಣ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
–ಚಿತ್ರ-ವರದಿ: ರೋನ್ಸ್ ಬಂಟ್ವಾಳ್