Advertisement

“ಚುನಾವಣ ಆಯೋಗದ ಮಾರ್ಗಸೂಚಿಯಂತೆ‌ ಕಾರ್ಯನಿರ್ವಹಿಸಿ’

01:07 AM Apr 07, 2024 | Team Udayavani |

ಮಣಿಪಾಲ: ಲೋಕಸಭಾ ಚುನಾವಣೆ ಪಾರದರ್ಶಕವಾಗಿ ಮುಕ್ತ ಹಾಗೂ ನ್ಯಾಯ ಸಮ್ಮತವಾಗಿ ಭಾರತೀಯ ಚುನಾವಣ ಆಯೋಗದ ನಿಯಮಾನುಸಾರ ಜರಗಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣ ವೀಕ್ಷಕ ಹಿತೇಶ್‌ ಕೆ. ಕೋಯಲ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

Advertisement

ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಜಿ.ಪಂ. ಸಭಾಂಗಣದಲ್ಲಿ ಶನಿವಾರ ನಡೆದ ಲೋಕಸಭೆ ಚುನಾವಣೆ-2024ರ ಸಿದ್ಧತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ನೀತಿ ಸಂಹಿತೆ ಉಲ್ಲಂಘನೆ ತಡೆಗೆ ರೂಪಿಸಿರುವ ವಿವಿಧ ತಂಡಗಳ ಅಧಿಕಾರಿಗಳು, ಚುನಾವಣೆ ಕಾರ್ಯಕ್ಕೆ ನಿಯೋಜನೆಗೊಂಡಿರುವ ಅಧಿಕಾರಿ ಹಾಗೂ ಸಿಬಂದಿಗೆ ತರಬೇತಿ ನೀಡುವಾಗ ಎಲ್ಲ ರೀತಿಯ ಸಾಧಕ-ಬಾಧಕಗಳ ಕುರಿತು ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

ಮತ ಯಂತ್ರಗಳ ಲಭ್ಯತೆ, ವಿಧಾನಸಭೆ ಕ್ಷೇತ್ರವಾರು ವಿತರಣೆ ಮತ್ತಿತರ ಸಿದ್ಧತೆ ಕುರಿತು ಮಾಹಿತಿ ಪಡೆದು, ಮತಯಂತ್ರಗಳ ನಿರ್ವಹಣೆ ವ್ಯವಸ್ಥಿತವಾಗಿ ಆಗಬೇಕು. ಯಾವುದೇ ರೀತಿಯ ಗೊಂದಲಗಳಿಗೆ ಅವಕಾಶ ನೀಡ ದಂತೆ ಜಾಗೃತಿ ವಹಿಸಬೇಕೆಂದು ಸೂಚನೆ ನೀಡಿದರು.

ಕ್ಷೇತ್ರದ ವೆಚ್ಚ ವೀಕ್ಷಕ ಆಲೋಕ್‌ ಕುಮಾರ್‌ ಮಾತನಾಡಿ, ನ್ಯಾಯ ಸಮ್ಮತವಾಗಿ ಚುನಾವಣೆ ನಡೆಸಲು ಅಧಿಕಾರಿಗಳು ಸಮನ್ವಯದೊಂದಿಗೆ ಕಾರ್ಯನಿರ್ವಹಿಸಬೇಕು. ಆಯೋಗ ನೀಡಿರುವ ನಿರ್ದೇಶನ ಗಳನ್ನು ತಪ್ಪದೇ ಪಾಲಿಸಬೇಕು. ನಿಗದಿತ ನಮೂನೆಗಳ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದರು.

Advertisement

ಚುನಾವಣಾಧಿಕಾರಿ ಡಾ| ಕೆ. ವಿದ್ಯಾಕುಮಾರಿ ಅವರು, ವ್ಯವಸ್ಥಿತ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಕೈಗೊಂಡಿರುವ ಸಿದ್ಧತೆ ಹಾಗೂ ಕಾರ್ಯಗಳ ಬಗ್ಗೆ ವಿವರ ನೀಡಿದರು.

ಸಹ ಚುನಾವಣಾಧಿಕಾರಿ ಮೀನಾ ನಾಗರಾಜ್‌, ಪೊಲೀಸ್‌ ವೀಕ್ಷಕಿ ಬಿನಿತಾ ಠಾಕೂರ್‌, ಜಿ.ಪಂ. ಸಿಇಒ ಪ್ರತೀಕ್‌ ಬಾಯಲ್‌, ಎಸ್‌ಪಿ ಡಾ| ಅರುಣ್‌ ಕೆ., ಅಪರ ಜಿಲ್ಲಾಧಿಕಾರಿ ಮಮತಾದೇವಿ ಜಿ.ಎಸ್‌., ಚಿಕ್ಕಮಗಳೂರು ಜಿಲ್ಲೆಯ ಸಿಇಒ ಗೋಪಾಲಕೃಷ್ಣ ಬಿ., ಎಸ್‌ಪಿ ವಿಕ್ರಮ್‌ ಅಮಾಠೆ, ಕರಾವಳಿ ಕಾವಲು ಪಡೆಯ ಎಸ್‌ಪಿ ಮಿಥುನ್‌ ಎಚ್‌.ಎನ್‌., ಡಿಎಫ್ಒ ಗಣಪತಿ, ಜಿಲ್ಲಾಮಟ್ಟದ ವಿವಿಧ ನೋಡಲ್‌ ಅಧಿಕಾರಿಗಳು ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next