Advertisement

ಅಕ್ರಮ ಸಕ್ರಮಕ್ಕೆ ಎರಡು ತಿಂಗಳಲ್ಲಿ ಕ್ರಮ: ಅಶೋಕ್‌

01:28 AM Apr 18, 2020 | Sriram |

ಬೆಂಗಳೂರು: ನಗರ ಪ್ರದೇಶಗಳಲ್ಲಿ ಕಂದಾಯ ಭೂಮಿಯಲ್ಲಿ ಅಕ್ರಮವಾಗಿ ಕಟ್ಟಿಕೊಂಡವರ ಮನೆಗಳನ್ನು 2 ತಿಂಗಳಲ್ಲಿ ಸಕ್ರಮಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಕಂದಾಯ ಸಚಿವ ಆರ್‌. ಅಶೋಕ್‌ ಹೇಳಿದ್ದಾರೆ

Advertisement

ಶುಕ್ರವಾರ ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅಕ್ರಮ ಮನೆಗಳ ಸಕ್ರಮ ಮಾಡುವ ಕುರಿತು ಸಿಎಂ ಯಡಿಯೂರಪ್ಪ ಸಮ್ಮುಖ ಚರ್ಚೆ ನಡೆಸಲಾಯಿತು. ಈ ಹಿಂದೆ ಅಕ್ರಮ ಸಕ್ರಮದ ಕುರಿತಂತೆ ಸಂಪುಟ ಉಪಸಮಿತಿ ಸರ್ಕಾರಕ್ಕೆ ಶಿಫಾರಸು ಮಾಡಿದ್ದ ವರದಿಯ ಕುರಿತೂ ಚರ್ಚಿಸಲಾಗಿದೆ.

ಪ್ರಕರಣಕ್ಕೆ ಸದ್ಯ ಸುಪ್ರೀಂ ಕೋರ್ಟ್‌ ತಡೆಯಾಜ್ಞೆ ಇದೆ. ಸರಕಾರ ಸಾಮಾನ್ಯ ಜನರಿಗೆ ಅನುಕೂಲವಾಗುವಂತೆ, ಮನೆ ಕಟ್ಟಿದವರನ್ನುಕಾಯ್ದೆ ವ್ಯಾಪ್ತಿಯಿಂದ ಹೊರಗಿಡಲುಕ್ರಮ ಕೈಗೊಳ್ಳಲಾಗುವುದು. ಸುಪ್ರೀಂ ಕೋರ್ಟ್‌ಗೆ ಈ ಬಗ್ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next