Advertisement

ಸುಳ್ಳು ಮಾಹಿತಿಯಿತ್ತ ಅಧಿಕಾರಿಗಳ ವಿರುದ್ಧ ಕ್ರಮ

12:45 PM Jul 12, 2019 | Suhan S |

ತುಮಕೂರು: ಸಭೆಗೆ ಸುಳ್ಳು ಮಾಹಿತಿ ನೀಡಿದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳ ಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್‌ ಎಚ್ಚರಿಕೆ ನೀಡಿದರು. ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗುರುವಾರ ನರೇಗಾ ಮತ್ತು ನೀರು ಸಂರಕ್ಷಣೆ ಕುರಿತು ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಒದಗಿಸುವ ಮಾಹಿತಿ ನಿಖರವಾಗಿರಬೇಕು. ಅಸ್ಪಷ್ಟ ಮಾಹಿತಿ ನೀಡಿದರೆ ಶಿಸ್ತು ಕ್ರಮ ಕೈಗೊಳ್ಳಲು ಸರ್ಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದರು.

Advertisement

ಗುರಿ ಮೀರಿ ಸಾಧನೆ ಮಾಡಿ: ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಶೇ.48 ಮಾತ್ರ ಉದ್ಯೋಗ ಒದಗಿಸಲಾಗಿದೆ. ನಿರೀಕ್ಷಿತ ಗುರಿ ಸಾಧನೆಯಾಗಿಲ್ಲ. ಇದರಿಂದ ನರೇಗಾ ಯೋಜನೆಯಡಿ ಉದ್ಯೋಗ ಒದಗಿಸುವಲ್ಲಿ ಹಿಂದುಳಿದಿದ್ದೇವೆ. ಹೀಗಾಗಿ ಗುರಿ ಮೀರಿ ಸಾಧನೆ ಮಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಂಟಿ ನಿರ್ದೇಶಕರಿಗೆ ತಾಕೀತು: ಕೃಷಿ ಭಾಗ್ಯ ಯೋಜನೆಯಡಿ ಕೈಗೊಳ್ಳಲಾಗುವ ಕೃಷಿಹೊಂಡ ಕಾಮಗಾರಿಯನ್ನು ಜು. 31ರೊಳಗಾಗಿ ಪೂರ್ಣ ಗೊಳಿಸಬೇಕು. ಮಳೆಗಾಲ ಪ್ರಾರಂಭ ವಾಗುವ ಮುನ್ನವೇ ಪೂರ್ಣಗೊಳಿಸಬೇಕಿತ್ತು. ಮಳೆ ಬಂದ ನಂತರ ಕೈಗೊಂಡರೆ ಏನು ಪ್ರಯೋಜನ? ರೈತರು ಮತ್ತೂಂದು ವರ್ಷ ಕಾಯಬೇಕಾ? ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಕೃಷಿ ಜಂಟಿ ನಿರ್ದೇಶಕರಿಗೆ ತಾಕೀತು ಮಾಡಿದರು.

ಬೆಳೆ ಪದ್ಧತಿ ಮಾಹಿತಿ ನೀಡಿ: ರೈತರಿಗೆ ಅನುಕೂಲ ವಾಗುವಂತೆ ರೇಷ್ಮೆ, ಕೃಷಿ, ತೋಟಗಾರಿಕೆ, ಪಶುಪಾಲನೆ, ಅರಣ್ಯ ಇಲಾಖೆಗಳು ಸಂಯುಕ್ತವಾಗಿ ಸರ್ಕಾರಿ ಯೋಜನೆಗಳ ಬಗ್ಗೆ ಅರಿವು ಕಾರ್ಯಾ ಗಾರವನ್ನು ಹಮ್ಮಿಕೊಂಡು ವರ್ಷಪೂರ್ತಿ ಆದಾಯ ತರುವಂತಹ ಚಟುವಟಿಕೆಗಳನ್ನು ಕೈಗೊಳ್ಳುವ ಬಗ್ಗೆ ಹಾಗೂ ಹೆಚ್ಚು ಇಳುವರಿ ನೀಡುವಂತಹ ಬಹು ಬೆಳೆ ಪದ್ಧತಿಯನ್ನು ಅನುಸರಿಸುವ ಬಗ್ಗೆ ಮಾಹಿತಿ ನೀಡಬೇಕು ಎಂದು ಹೇಳಿದರು.

ಉದ್ಯೋಗ ಕಲ್ಪಿಸಿ: ಬಡ ರೈತರನ್ನು ಗುರುತಿಸಿ ಸರ್ಕಾರದಿಂದ ದೊರೆಯುವ ಸಾಲ ಸೌಲಭ್ಯ, ಸಹಾಯಧನ ಸೌಲಭ್ಯದ ಬಗ್ಗೆ ಜಾಗೃತಿ ಮೂಡಿಸ ಬೇಕು. ಜಿಲ್ಲೆಯಲ್ಲಿ ಉದ್ಯೋಗ ಚೀಟಿ ನೀಡಲಾಗಿ ರುವ ಎಲ್ಲರಿಗೂ ಕಡ್ಡಾಯವಾಗಿ ಉದ್ಯೋಗ ಒದಗಿಸಬೇಕು. ಈ ನಿಟ್ಟಿನಲ್ಲಿ ಅಧಿಕಾರಿಗಳು ಇಚ್ಛಾಶಕ್ತಿಯಿಂದ ಸೇವೆ ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದರು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿರ್ವಹಣೆ ಹಾಗೂ ಬರ ನಿರ್ವಹಣೆ ತಮಗೆ ಮೆಚ್ಚುಗೆ ತಂದಿದೆ ಎಂದು ತಿಳಿಸಿದರು.

Advertisement

ಜಿಪಂ ಸಿಇಒ ಶುಭಾ ಕಲ್ಯಾಣ್‌ ಮಾತನಾಡಿ, ಜಿಲ್ಲೆಯಲ್ಲಿ ನರೇಗಾ ಯೋಜನೆಯಡಿ ಪ್ರಸಕ್ತ ವರ್ಷದಲ್ಲಿ ಸಾಮಾಜಿಕ ಅರಣ್ಯ, ಪ್ರಾದೇಶಿಕ ಅರಣ್ಯ, ಕೃಷಿ, ರೇಷ್ಮೆ, ತೋಟಗಾರಿಕೆ, ವಿಭಾಗ ದಿಂದ 2,27,991 ಮಾನವ ದಿನಗಳನ್ನು ಸೃಜಿಸ ಲಾಗಿದೆ. ಈವರೆಗೂ ಶೇ.13.65ರಷ್ಟು ಗುರಿ ಸಾಧಿಸ ಲಾಗಿದೆ ಎಂದು ಸಭೆಗೆ ಮಾಹಿತಿ ನೀಡಿದರು. ಡೀಸಿ ಡಾ.ಕೆ.ರಾಕೇಶ್‌ಕುಮಾರ್‌, ತಾಪಂ ಇಒ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next