Advertisement

ಬಾಲಗಂಗಾಧರನಾಥ ಸ್ವಾಮೀಜಿ, ಶಿವಕುಮಾರ ಸ್ವಾಮೀಜಿ ಸ್ಮಾರಕಕ್ಕೆ ಕ್ರಮ: ಸಿ.ಟಿ.ರವಿ

09:44 AM Feb 01, 2020 | Sriram |

ಬೆಂಗಳೂರು: ಸಿದ್ದಗಂಗಾ ಮಠದ ಶಿವಕುಮಾರ ಸ್ವಾಮೀಜಿ ಹಾಗೂ ಆದಿ ಚುಂಚನಗಿರಿ ಮಠದ ಬಾಲಗಂಗಾಧರನಾಥ ಸ್ವಾಮಿ ಅವರ ಹುಟ್ಟೂರಿನಲ್ಲಿ ಸ್ಮಾರಕ ಸ್ಥಾಪನೆ ಹಾಗೂ ಅಭಿವೃದ್ಧಿ ಸಂಬಂಧ ತಲಾ 100 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ತಿಳಿಸಿದ್ದಾರೆ.

Advertisement

ವಿಧಾನಸೌಧದಲ್ಲಿ ಶುಕ್ರವಾರ ಈ ಸಂಬಂಧ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ವೀರಾಪುರ ಮತ್ತು ಬಾನಂದೂರು ಗ್ರಾಮಗಳು ಮಹಾಪುರುಷರು ಜನ್ಮ ತಾಳಿದ ಗ್ರಾಮಗಳು. ಸಿದ್ದಗಂಗಾ ಸ್ವಾಮೀಜಿ ಜನಿಸಿದ ವೀರಾಪುರ ಮತ್ತು ಆದಿ ಚುಂಚನಗಿರಿ ಸ್ವಾಮೀಜಿಯ ಜನ್ಮಸ್ಥಳ ಬಾಣಂದೂರು ಗ್ರಾಮದ ಸಮಗ್ರ ಅಭಿವೃದ್ಧಿಗೆ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದರು.

ಸಭೆಯಲ್ಲಿ ಎರಡು ಗ್ರಾಮಗಳ ಅಭಿವೃದ್ಧಿ ಸಂಬಂಧ ಸಮಗ್ರ ಯೋಜನಾ ವರದಿಯ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ವೀರಾಪುರ ಗ್ರಾಮದ ಅಭಿವೃದ್ಧಿಯ ಕುರಿತ ವರದಿಯು ಸಮಾಧಾನ ತಂದಿದೆ. ಆದರೆ, ಬಾನಂದೂರು ಗ್ರಾಮದ ಅಭಿವೃದ್ಧಿಯ ವರದಿ ಸಮಾಧಾನಕರವಾಗಿಲ್ಲ. ಮತ್ತೂಮ್ಮೆ ಅವಲೋಕನ ನಡೆಸುವ ಬಗ್ಗೆ ಅಧಿಕಾರಿಗಳಿಗೆ ತಿಳಿಸಲಾಗಿದೆ ಎಂದು ತಿಳಿಸಿದರು.

ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಅಂತಿಮಗೊಳಿಸಲಾಗುವುದು. ಗ್ರಾಮಗಳ ರಸ್ತೆ, ಶಾಲೆ, ಸಮುದಾಯ ಭವನ ಸೇರಿದಂತೆ ವಿಶ್ವ ಆಕರ್ಷಣೀಯ ಸ್ಥಳವನ್ನಾಗಿ ಮಾಡಲು ಕ್ರಮ ಕೈಗೊಳ್ಳಲಾಗುವುದು. ಪ್ರತಿಮೆಗಳನ್ನು ಸಹ ನಿರ್ಮಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next