Advertisement

Cross-vote ಹಾಕಿದ ಶಾಸಕರ ವಿರುದ್ಧ ಕ್ರಮ: ಮಹಾರಾಷ್ಟ್ರ ಕಾಂಗ್ರೆಸ್‌

12:32 AM Jul 14, 2024 | Team Udayavani |

ಮುಂಬಯಿ: ಮಹಾರಾಷ್ಟ್ರದ 11 ವಿಧಾನಪರಿಷತ್‌ ಸ್ಥಾನಗಳಿಗೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ ಕಾಂಗ್ರೆಸ್‌ ಶಾಸಕರ ವಿರುದ್ಧ ಕಠಿನ ಕ್ರಮ ಕೈಗೊಳ್ಳುವುದಾಗಿ ಪಕ್ಷ ಹೇಳಿದೆ. 11ರ ಪೈಕಿ 9ರಲ್ಲಿ ಆಡಳಿತಾರೂಢ ಮಹಾಯುತಿ ಮೈತ್ರಿಕೂಡ ಗೆಲುವು ಸಾಧಿಸಿತ್ತು. ಈ ವೇಳೆ ಕನಿಷ್ಠ 7 ಮಂದಿ ಕಾಂಗ್ರೆಸ್‌ ಶಾಸಕರು ಅಡ್ಡ ಮತದಾನ ಮಾಡಿರುವುದು ದೃಢಪಟ್ಟಿತ್ತು. ಈ ಕುರಿತು ಶನಿವಾರ ಮಾತನಾಡಿದ ರಾಜ್ಯ ಕಾಂಗ್ರೆಸ್‌ ಅಧ್ಯಕ್ಷ ನಾನಾ ಪಟೋಲೆ, “ಅಡ್ಡ ಮತದಾನ ಮಾಡಿದ್ದು ಯಾರೆಂಬುದು ಗೊತ್ತಾಗಿದೆ. ಪಕ್ಷ ವಿರೋಧಿ ಕೃತ್ಯ ಎಸಗಿ, ಪಕ್ಷಕ್ಕೆ ದ್ರೋಹ ಎಸಗಿದವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಲಾಗುವುದು. ಅವರಿಗೆ ನಿರ್ಗಮನದ ಬಾಗಿಲು ತೋರಿಸಲಾಗುವುದು’ ಎಂದಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next