Advertisement
ರಾಜ್ಯ ಸರ್ಕಾರದ ಪರ ಗ್ರಾಮೀಣಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರೇ ಜಿಎಸ್‌ಟಿ ಕೌನ್ಸಿಲ್ ಸಭೆಗೆ ಹಾಜರಾಗುತ್ತಿದ್ದಾರೆ. ರಾಜ್ಯದಲ್ಲಿನ ಸಮಸ್ಯೆಗಳನ್ನು ಪ್ರತಿ ಬಾರಿ ಕೌನ್ಸಿಲ್ ಸಭೆಯಲ್ಲಿ ಕೇಂದ್ರ ಸರ್ಕಾರದ ಗಮನಕ್ಕೆ ತರುತ್ತಿದ್ದಾರೆ ಎಂದರು. ಎಪಿಎಂಸಿಗಳಲ್ಲಿ ಸುಳ್ಳು ದಾಖಲೆ ತೋರಿಸಿ ತೆರಿಗೆ ವಂಚನೆ ಮಾಡುವ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಗಮನ ಸೆಳೆದ ಬಿಜೆಪಿಯ ಮಾಧುಸ್ವಾಮಿ, ಆರಗ ಜ್ಞಾನೇಂದ್ರ, ಬಿ.ಸಿ. ನಾಗೇಶ್ ಅವರಿಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ತೆರಿಗೆ ವಂಚನೆ ಪ್ರಕರಣಗಳನ್ನು ಪತ್ತೆ ಹಚ್ಚಲು ಸರ್ಕಾರ ತಕ್ಷಣ ಕ್ರಮಕೈಗೊಳ್ಳಲಿದೆ ಎಂದು ಹೇಳಿದರು. ವಹಿವಾಟುಗಳಲ್ಲಿ ತಪ್ಪು ಮಾಹಿತಿ ನೀಡುತ್ತಿರುವವರ ಬಗ್ಗೆಯೂ ಕ್ರಮ ಕೈಗೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ 60ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಕಾಯ್ದೆ ಎಂದು ನಿರ್ಲಕ್ಷ್ಯ ತೋರುತ್ತಿದ್ದಾರೆ. ಜಿಲ್ಲಾ ಕೇಂದ್ರಗಳಲ್ಲಿ ಹೆಲ್ಪ್ಡೆಸ್ಕ್ ಗಳಲ್ಲಿ ಸಂಪೂರ್ಣ ಮಾಹಿತಿ ಹೊಂದಿರುವ ಅಧಿಕಾರಿಗಳನ್ನು ನಿಯೋಜಿಸಬೇಕೆಂದು ಸಲಹೆ ನೀಡಿದರು. ಪ್ರತಿಪಕ್ಷಗಳ ಸಲಹೆಯಂತೆ ತರಬೇತಿ ಹೊಂದಿದ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ಜಿಎಸ್‌ಟಿ ಬಂದ ಮೇಲೆ ಚೆಕ್‌ಪೋಸ್ಟ್ ಗಳನ್ನು ರದ್ದು ಮಾಡಿರುವುದರಿಂದ ಆದಾಯ ಸೋರಿಕೆ ಮತ್ತು ಕಳ್ಳ ಸಾಗಾಣಿಕೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು. ಕೇಂದ್ರ ಗೃಹ ಸಚಿವರ ಜತೆ ಚರ್ಚೆ: ಭರವಸೆ
ವಿಧಾನಸಭೆ: ವಿಧಾನಸಭೆ ಕ್ಷೇತ್ರಗಳಲ್ಲಿ ಶಾಸಕರಿಗೂ ರಾಷ್ಟ್ರಧ್ವಜಾರೋಹಣ ಮಾಡಲು ಅವಕಾಶ ಕಲ್ಪಿಸುವ ಕುರಿತು ಕೇಂದ್ರ ಗೃಹ ಸಚಿವರ ಜತೆ ಚರ್ಚಿಸಲಾಗುವುದು ಎಂದು ಸಿಎಂ ಎಚ್.ಡಿ. ಕುಮಾರಸ್ವಾಮಿ ಭರವಸೆ ನೀಡಿದ್ದಾರೆ. ಶೂನ್ಯ ವೇಳೆಯಲ್ಲಿ ಜೆಡಿಎಸ್‌ನ ನಾಗನಗೌಡ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಮುಖ್ಯಮಂತ್ರಿ, ರಾಷ್ಟ್ರ ಧ್ವಜಾರೋಹಣ ವಿಚಾರ ಕೇಂದ್ರದ ಕಾಯ್ದೆ ವ್ಯಾಪ್ತಿಯಲ್ಲಿ ಬರುತ್ತದೆ. ಹೀಗಾಗಿ, ರಾಜ್ಯಮಟ್ಟದಲ್ಲಿ ಏನೂ ಮಾಡಲಾಗುವುದಿಲ್ಲ. ದೆಹಲಿಗೆ ಹೋದಾಗ ಕೇಂದ್ರ ಗೃಹ ಸಚಿವರ ಬಳಿ ಮಾತನಾಡಿ
ನಿಯಮಾವಳಿ ಸರಳೀಕರಣ ಮಾಡಬಹುದಾ ಎಂದು ಚರ್ಚಿಸಲಿದ್ದೇನೆ ಎಂದು ಹೇಳಿದರು. ಇದಕ್ಕೂ ಮುನ್ನ ಮಾತನಾಡಿದ ನಾಗನಗೌಡ, ಪ್ರಧಾನಿಗಳು ದೆಹಲಿ ಕೆಂಪುಕೋಟೆ ಮೇಲೆ ಧ್ವಜಾರೋಹಣ ನೆರವೇರಿಸುತ್ತಾರೆ. ಮುಖ್ಯ ಮಂತ್ರಿಗಳು ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ಮಾಡಿ ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾ ಮಟ್ಟದಲ್ಲಿ ಧ್ವಜಾರೋಹಣ ಮಾಡುತ್ತಾರೆ. ಆದರೆ, ತಾಲೂಕು ಮಟ್ಟದಲ್ಲಿ ತಹಸೀಲ್ದಾರ್ ಧ್ವಜಾರೋಹಣ ಮಾಡಿದರೆ ನಮ್ಮ ಹಕ್ಕಿಗೆ ಚ್ಯುತಿಯಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ರಾಜ್ಯ ಸರ್ಕಾರ ಕೇಂದ್ರದ ಜತೆ ಮಾತನಾಡಿ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.