Advertisement
ಬುಧವಾರ ನಗರದ ಬಹುಮಹಡಿ ಕಟ್ಟಡದಲ್ಲಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನಲ್ಲಿ ಯಾವುದೇ ಕಾರಣಕ್ಕೂ ಪಿಯುಸಿ ವಾರ್ಷಿಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಕೂಡದು. ಸಾಮೂಹಿಕ ನಕಲು ಸಹಿತವಾಗಿ ಯಾವುದೇ ರೀತಿಯ ಪರೀಕ್ಷಾ ಅಕ್ರಮ ನಡೆಯದಂತೆ ಎಚ್ಚರ ವಹಿಸುವ ಸಂಬಂಧ ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
Related Articles
Advertisement
ಪ್ರಶ್ನೆ ಪತ್ರಿಕೆಗಳನ್ನು ಶೇಖರಿಸಿಡುವ ಜಿಲ್ಲಾ ಖಜಾನೆಗೆ ಇನ್ನಷ್ಟು ಭದ್ರತೆ ಒದಗಿಸಲು ಕ್ರಮ ತೆಗೆದುಕೊಳ್ಳಲಾಗುತ್ತದೆ. ಪ್ರಶ್ನೆ ಪತ್ರಿಕೆ ತಯಾರಿಕೆಯಿಂದ ಆರಂಭಗೊಂಡು, ಪರೀಕ್ಷಾ ಕೇಂದ್ರಕ್ಕೆ ವಿತರಣೆಯವರೆಗೂ ಎಲ್ಲಾ ರೀತಿಯ ಸುರಕ್ಷಾ ಕ್ರಮ ತೆಗೆದುಕೊಳ್ಳಲಾಗುತ್ತದೆ. ವಿದ್ಯಾರ್ಥಿಗಳು ಯಾವುದೇ ಭಯವಿಲ್ಲದೆ ಪರೀಕ್ಷೆ ಬರೆಯಬಹುದು ಎಂದರು.
ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುವುದರ ಜತೆಗೆ ಪ್ರವಾಹದಿಂದ ಉಂಟಾಗಿರುವ 22 ಜಿಲ್ಲೆಗಳ ಶಾಲಾ, ಕಾಲೇಜು ಮಕ್ಕಳ ಸಮಸ್ಯೆಗೂ ಸರ್ಕಾರ ಸ್ಪಂದಿಸುತ್ತಿದೆ. ಪೀಠೊಪಕರಣಗಳ ಅಳವಡಿಕೆ ಹಾಗೂ ಕೊಠಡಿ ನಿರ್ಮಾಣ ಕಾರ್ಯ ನಡೆಯುತ್ತಿದೆ. ತುರ್ತು ಪರಿಹಾರಕ್ಕೆ 500 ಕೋಟಿ ರೂ.ಬಂದಿದೆ.
ಶೈಕ್ಷಣಿಕವಾಗಿ ಮಕ್ಕಳಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಲಿದ್ದೇವೆ. ಪಠ್ಯಪುಸ್ತಕ ಹಾಗೂ ಎರಡನೇ ಜತೆ ಸಮವಸ್ತ್ರ ದಸರಾ ರಜೆ ಮುಗಿದು ಶಾಲೆ ಪುನರ್ ಆರಂಭವಾಗುವಾಗ ವಿದ್ಯಾರ್ಥಿಗಳಿಗೆ ಸಿಗಲಿದೆ ಎಂದು ತಿಳಿಸಿದರು. ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಉಪಸ್ಥಿತರಿದ್ದರು.