Advertisement

ಮೈಕ್ರೋ ಫೈನಾನ್ಸ್‌ ವಿರುದ್ಧ ಕ್ರಮಕ್ಕೆ ಒತ್ತಾಯ

05:46 AM Jun 06, 2020 | Suhan S |

ಕೊಪ್ಪಳ: ಜಗತ್ತಿಗೆ ವ್ಯಾಪಿಸಿರುವ ಮಹಾಮಾರಿ ಕೋವಿಡ್ ವೈರಸ್‌ ಸಾಂಕ್ರಾಮಿಕ ರೋಗವನ್ನು ತಡೆಗಟ್ಟುವುದಕ್ಕಾಗಿ ಭಾರತದಲ್ಲೂ ನಿರಂತರ ಹೋರಾಟ ನಡೆಸಲಾಗುತ್ತಿದೆ. ಲಾಕ್‌ಡೌನ್‌ನಲ್ಲಿ ಹಲವು ಜನರು ಸಂಕಷ್ಟ ಎದುರಿಸುತ್ತಿದ್ದಾರೆ. ಇದರಲ್ಲಿ ಮೈಕ್ರೋ ಫೈನಾನ್ಸ್‌ಗಳು ಸಾಲ ವಸೂಲಾತಿಗೆ ಜನರಿಗೆ ಕಿರುಕುಳ ನೀಡುತ್ತಿದ್ದು, ಕೂಡಲೇ ಅವುಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕೊಪ್ಪಳ ಬ್ಲಾಕ್‌ ಕಾಂಗ್ರೆಸ್‌ ಸಮಿತಿಯಿಂದ ತಹಶೀಲ್ದಾರ್‌ ಅವರಿಗೆ ಮನವಿ ಸಲ್ಲಿಸಲಾಯಿತು.

Advertisement

ಎರಡು ತಿಂಗಳ ಕಾಲ ಲಾಕ್‌ಡೌನ್‌ ಜಾರಿಯಾಗಿದ್ದರಿಂದ ಜನತೆ ಕೆಲಸ ಇಲ್ಲದೆ ತುಂಬ ತೊಂದರೆ ಅನುಭವಿಸಿದ್ದಾರೆ. ಕೇಂದ್ರ ಸರ್ಕಾರ ಆಗಸ್ಟ್‌ 2020ರ ವರೆಗೂ ಸಾಲ ವಸೂಲಾತಿ ಮುಂದೂಡಬೇಕೆಂದು ತಿಳಿಸಿದ್ದರೂ ಸ್ವ-ಸಹಾಯ ಗುಂಪುಗಳು ಹಾಗೂ ಮೈಕ್ರೋ ಫೈನಾನ್ಸ್‌ ಏಜೆನ್ಸಿಗಳು ಸಾಲ ವಸೂಲಾತಿಗಾಗಿ ಜನಸಾಮಾನ್ಯರಿಗೆ ಕಿರುಕುಳ ನೀಡುತ್ತಿವೆ. ಕೂಡಲೇ ಅಂತಹ ಫೈನಾನ್ಸ್ಗಳ ಮೇಲೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಗಿದೆ.

ಈ ವೇಳೆ ನಗರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ. ಪಾಷಾ ಕಾಟನ್‌, ಮಾನ್ವಿ ಪಾಷಾ, ಸಲೀಂ ಅಳವಂಡಿ, ವಸೀಮ್‌ ಮನಿಯಾರ, ಪರಶುರಾಮ ಕೆರಹಳ್ಳಿ, ಯೂಸುಫ್‌ ಮಾಳೆಕೊಪ್ಪ, ಆಜಮ್‌ ಕರ್ಕಿಹಳ್ಳಿ, ರಹೀಮ್‌ ಶೇಖ್‌ ಸೇರಿ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next