Advertisement

ಶುಲ್ಕ ವಿವರ ನೀಡದ ಶಾಲೆಗಳ ವಿರುದ್ಧ ಕ್ರಮ

11:26 PM Aug 24, 2020 | mahesh |

ಬೆಂಗಳೂರು: ಖಾಸಗಿ ಶಾಲೆಗಳು 2020-21ನೇ ಸಾಲಿಗೆ ಪಡೆಯುವ ಶುಲ್ಕದ ವಿವರವನ್ನು ಸಾರ್ವಜನಿಕ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂಬ ನಿಯಮ ಉಲ್ಲಂಘಿಸಿರುವ ಶಾಲಾಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮಕ್ಕೆ ಇಲಾಖೆ ಸೂಚನೆ ನೀಡಿದೆ.

Advertisement

ಎಲ್ಲ ಖಾಸಗಿ ಶಾಲೆಗಳು ಶೈಕ್ಷಣಿಕ ಶುಲ್ಕದ ಮಾಹಿತಿಯನ್ನು ಇಲಾಖೆಯ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂಬ ನಿಯಮವಿದೆ. ಆದರೂ, ಬಹುತೇಕ ಖಾಸಗಿ ಶಾಲೆಗಳು ಮಕ್ಕಳಿಂದ ಪಡೆಯುತ್ತಿರುವ ಶುಲ್ಕದ ವಿವರ ವನ್ನು ಪ್ರಕಟಿಸಿಲ್ಲ. ಸರಕಾರದ ಆದೇಶ ಹಾಗೂ ಆಯುಕ್ತಾಲಯದ ನಿರ್ದೇಶನ ಉಲ್ಲಂ ಸಿದ ಶಾಲೆಗಳ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಮತ್ತು ಮುಂದೆ ಇಂತಹ ಘಟನೆ ಮರುಕಳಿಸಿದಲ್ಲಿ, ಸಂಬಂಧಪಟ್ಟ ಕ್ಷೇತ್ರ ಶಿಕ್ಷಣಾಧಿಕಾರಿಗಳೇ ನೇರ ಜವಾಬ್ದಾರರಾಗಿರುತ್ತಾರೆ ಎಂದು ಇಲಾಖೆ ತಿಳಿಸಿದೆ.

ಈ ಬಗ್ಗೆ ಆಯಾ ಜಿಲ್ಲಾ ಉಪ ನಿರ್ದೇಶಕರು ಆಗಿಂದಾಗ್ಗೆ ಮೇಲ್ವಿ ಚಾರಣೆ ನಡೆಸಿ, ಎಲ್ಲ ಅನುದಾನ ರಹಿತ ಶಾಲೆಗಳ ಶುಲ್ಕದ ವಿವರವನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು. ಸೆ. 30ರೊಳಗೆ ಇಲಾಖೆಯ ತಂತ್ರಾಂಶದಲ್ಲಿ ಶುಲ್ಕದ ವಿವರ ಪ್ರಕಟಿಸದ ಶಾಲೆಗಳ ವಿರುದ್ಧ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರದಲ್ಲಿ ಕಡ್ಡಾಯವಾಗಿ ಸ್ವಯಂ ದೂರು ದಾಖಲಿಸಿ, ಕಾನೂನು ಕ್ರಮ ವಹಿಸಿ, ವರದಿಯನ್ನು ಇಲಾಖೆಯ ಕೇಂದ್ರ ಕಚೇರಿಗೆ ಸಲ್ಲಿಸಬೇಕು ಎಂದು ಕಟ್ಟುನಿಟ್ಟಾಗಿ ಸೂಚಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next