Advertisement
ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್ ಪ್ರಶ್ನೆಗೆ ಉತ್ತರಿಸಿದ ಅವರು, ಸರ್ಕಾರಿ ಭೂಮಿ ಒತ್ತುವರಿ ತಡೆಯಲು ಬೀಟ್ ಆ್ಯಪ್ ಜಾರಿಗೆ ತರಲಾಗಿದೆ. ಸರ್ಕಾರಿ ಭೂಮಿಗಳನ್ನು ಗುರುತಿಸಿ ಜಿಯೋ ಫೆನ್ಸಿಂಗ್ ಮಾಡಿ ಒತ್ತುವರಿಯಿಂದ ರಕ್ಷಣೆ ಮಾಡಲಾಗುತ್ತಿದೆ. ಪ್ರತಿ ಮೂರು ತಿಂಗಳಿಗೊಮ್ಮೆ ಸ್ಥಳ ಪರಿಶೀಲಿಸಿ ಒತ್ತುವರಿಯಾದರೆ ವಿಡಿಯೋ ಅಪ್‌ಲೋಡ್ ಮಾಡಲು ಸೂಚಿಸಲಾಗಿದೆ. ಒತ್ತುವರಿ ತೆರವುಗೊಳಿಸಿದ ಭೂಮಿಗೆ ಕಂದಕ, ತಂತಿಬೇಲಿ ಹಾಕಿ ನಾಮಫಲಕ ಅಳವಡಿಸಲು ಕ್ರಮ ವಹಿಸಲಾಗುತ್ತಿದೆ. ಬೆಂಗಳೂರು ನಗರದಲ್ಲಿ ವಿಶೇಷ ಜಾರಿದಳ ಕೋಶ ರಚಿಸಲಾಗಿದೆ ಎಂದು ವಿವರಿಸಿದರು.
ಬೆಳಗಾವಿ ಅಧಿವೇಶನ ಪ್ರಾರಂಭವಾದ ಬಳಿಕ ಇದೇ ಮೊದಲ ಬಾರಿಗೆ ಶಾಸಕ ರಮೇಶ್ ಜಾರಕಿಹೊಳಿ ಸೋಮವಾರ ವಿಧಾನಸಭೆಗೆ ಆಗಮಿಸಿದರು. ಆದರೆ ಅವರು ಕಲಾಪದಲ್ಲಿ ಪಾಲ್ಗೊಳ್ಳುವುದಕ್ಕೆ ಮುನ್ನವೇ ಸ್ಪೀಕರ್ ಹತ್ತು ನಿಮಿಷಗಳ ಕಾಲ ಕಲಾಪ ಮುಂದೂಡಿದ್ದರು. ಬಿಜೆಪಿ ಪ್ರತಿಭಟನೆ ನಡೆಸಿದ್ದರಿಂದ ಸಹಸದಸ್ಯರ ಜತೆ ಕಾಲ ಕಳೆಯಬೇಕಾಯಿತು.