Advertisement

ಏಳುಮಲೈ ಸಾವಿಗೆ ಕಾರಣರಾದವರ ವಿರುದ್ಧ ಕ್ರಮ

12:09 PM Dec 27, 2018 | |

ಬೆಂಗಳೂರು: ಸಗಾಯಪುರ ವಾರ್ಡ್‌ ಪಾಲಿಕೆ ಸದಸ್ಯ ಏಳುಮಲೈ ಸಾವಿಗೆ ಕಾರಣರಾದವರ ವಿರುದ್ಧ ಕಾನೂನು
ಕ್ರಮ ಕೈಗೊಳ್ಳುವುದಾಗಿ ಮೇಯರ್‌ ಗಂಗಾಂಬಿಕೆ ಭರವಸೆ ನೀಡಿದರು.

Advertisement

ಇತ್ತೀಚೆಗೆ ನಿಧನರಾದ ಏಳುಮಲೈ ಹಾಗೂ ಪದ್ಮಶ್ರೀ ಸೂಲಗಿತ್ತಿ ನರಸಮ್ಮ ಅವರಿಗೆ ಬುಧವಾರ ನಡೆದ ಪಾಲಿಕೆ ಕೌನ್ಸಿಲ್‌ ಸಭೆಯಲ್ಲಿ ಸಂತಾಪ ಸೂಚಿಸಲಾಯಿತು. ಈ ವೇಳೆ ಶ್ರದ್ಧಾಂಜಲಿ ಸಲ್ಲಿಸಿದ ಬಹುತೇಕ ಸದಸ್ಯರು ಏಳುಮಲೈ ಸಾವಿಗೆ ಕಾರಣವಾದ ಸಂತೋಷ್‌ ಆಸ್ಪತ್ರೆ ವಿರುದ್ಧ ಕ್ರಮ ಕೈಗೊಳ್ಳಬೇಕು. ಪಾಲಿಕೆ ಸದಸ್ಯರಿಗೇ ಹೀಗಾದರೆ, ಸಾಮಾನ್ಯ ಜನರ ಪರಿಸ್ಥಿತಿಯೇನು? ಆಸ್ಪತ್ರೆ ವಿರುದ್ಧ ಏನು ಕ್ರಮಕೈಗೊಂಡಿದ್ದೀರಿ ಎಂದು ಪ್ರಶ್ನಿಸಿದರು.

ಇದಕ್ಕೆ ಉತ್ತರಿಸಿದ ಮೇಯರ್‌ ಗಂಗಾಂಬಿಕೆ, ಏಳುಮಲೈ ಅವರಿಗೆ ಚಿಕಿತ್ಸೆ ನೀಡಿದ ಸಂತೋಷ್‌ ಆಸ್ಪತ್ರೆಯ ವಿರುದ್ಧ
ವಿಚಾರಣೆ ನಡೆಸುವಂತೆ ಈಗಾಗಲೇ ಕರ್ನಾಟಕ ವೈದ್ಯಕೀಯ ಮಂಡಳಿಗೆ ಪತ್ರ ಬರೆಯಲಾಗಿದೆ. ಅದರಂತೆ
ಈಗಾಗಲೇ ತನಿಖೆ ಆರಂಭವಾಗಿದ್ದು, ಶೀಘ್ರವೇ ವರದಿ ಬರಲಿದೆ. ಅದನ್ನು ಸರ್ಕಾರದ ಗಮನಕ್ಕೆ ತಂದು ಸಂಬಂಧಪಟ್ಟವರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ಇದಕ್ಕೂ ಮೊದಲು ಪಾಲಿಕೆ ಸದಸ್ಯರು ಏಳುಮಲೈ ಹಾಗೂ ಸೂಲಗಿತ್ತಿ ನರಸಮ್ಮ ಅವರ ಸಾಮಾಜಿಕ
ಕಾಳಜಿಯ ಬಗ್ಗೆ ಸ್ಮರಿಸಿದರು. ಮೇಯರ್‌ ಗಂಗಾಂಬಿಕೆ, ಉಪಮೇಯರ್‌ ಭದ್ರೇಗೌಡ, ಆಡಳಿತ ಪಕ್ಷ ನಾಯಕ ಎಂ.ಶಿವರಾಜು, ಪ್ರತಿಪಕ್ಷ ನಾಯಕ ಪದ್ಮನಾಭರೆಡ್ಡಿ, ಜೆಡಿಎಸ್‌ ನಾಯಕಿ ನೇತ್ರಾ ನಾರಾಯಣ್‌, ಮಾಜಿ ಮೇಯರ್‌
ಗಳಾದ ಮಂಜುನಾಥ ರೆಡ್ಡಿ, ಪದ್ಮಾವತಿ ಮಾತನಾಡಿದರು

Advertisement

Udayavani is now on Telegram. Click here to join our channel and stay updated with the latest news.

Next