Advertisement

ಶಾಲೆ, ಕಾಲೇಜು ಸಮೀಪ ತಂಬಾಕು ಮಾರಾಟ ವಿರುದ್ಧ ಕ್ರಮ: ಜಿಲ್ಲಾಧಿಕಾರಿ ಸೂಚನೆ

01:03 AM Jan 13, 2022 | Team Udayavani |

ಮಂಗಳೂರು: ಎಲ್ಲ ಶಾಲೆ ಕಾಲೇಜುಗಳ 100 ಮೀಟರ್‌ ವ್ಯಾಪ್ತಿಯನ್ನು ತಂಬಾಕು ಮುಕ್ತ ಪ್ರದೇಶವೆಂದು ಘೋಷಣೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Advertisement

ಅವರು ಬುಧವಾರ ನಗರದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದಡಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಿಯಮ ಉಲ್ಲಂಘಿಸುವವರಿಗೆ ದಂಡ ವಿಧಿಸಬೇಕು ಎಂದರು.

ಸರಕಾರಿ ಕಚೇರಿಗಳಲ್ಲಿಯೂ ತಂಬಾಕು ಉಪಯೋಗ ಅಥವಾ ಸೇವನೆಗೆ ಅವಕಾಶವಿಲ್ಲ, ಇದಕ್ಕೆ ಸಂಬಂಧಸಿದಂತೆ ಆಯಾ ಕಚೇರಿ ಮುಖ್ಯಸ್ಥರು ತಮ್ಮ ಕಚೇರಿ ಅಥವಾ ಕಟ್ಟಡಗಳಲ್ಲಿ ತಂಬಾಕು ಮುಕ್ತ ಎಂಬ ನಾಮಫಲಕ ಅಳವಡಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಇದನ್ನೂ ಓದಿ:ನೋಕಿಯಾದಿಂದ ಹೊಸ ಇಯರ್ ಬಡ್ ಬಿಡುಗಡೆ : ಬೆಲೆ ಎಷ್ಟು ಗೊತ್ತಾ?

ತಂಬಾಕು ಮುಕ್ತ ಗ್ರಾಮ
ಪ್ರತೀ ಗ್ರಾ.ಪಂ. ಅಡಿಯಲ್ಲಿ ಒಂದು ಗ್ರಾಮವನ್ನು ತಂಬಾಕು ಮುಕ್ತ ಗ್ರಾಮವನ್ನಾಗಿ ಮಾಡಲು ಸೂಕ್ತ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾ ಪಂಚಾಯತ್‌ನ ಉಪ ಕಾರ್ಯದರ್ಶಿ (ಆಡಳಿತ) ಅವರಿಗೆ ಸೂಚಿಸಲಾಗುವುದು ಮತ್ತು ಆಯಾ ಗ್ರಾಮ ಪಂಚಾಯತ್‌ನ ಪಿಡಿಒ ಪ್ರತೀ ತಿಂಗಳು ಕೋಟಾ³ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ತಿಳಿಸಿದರು.

Advertisement

ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಲಹೆಗಾರ ಡಾ| ಹನುಮಂತರಾಯಪ್ಪ, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ| ಜಗದೀಶ್‌ ಮೊದಲಾದವರು ಸಭೆಯಲ್ಲಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next