Advertisement

Prajwal Revanna ಗೆದ್ದರೆ ಎನ್‌ಡಿಎಯಿಂದ ಕ್ರಮ: ಆರ್‌. ಅಶೋಕ್‌

11:55 PM May 05, 2024 | Team Udayavani |

ಬೆಂಗಳೂರು: ಪ್ರಜ್ವಲ್‌ ರೇವಣ್ಣನನ್ನು ಈಗ ಅತ್ಯಾಚಾರಿ ಎಂದು ಕರೆಯುವ ಸಿಎಂ ಸಿದ್ದರಾಮಯ್ಯ, ಈ ಹಿಂದೆ ಟ್ವೀಟ್‌ ಮಾಡಿ “ಯಂಗ್‌ ಲೀಡರ್‌ ವಿತ್‌ ಗ್ರೇಟ್‌ ವಿಶನ್‌’ ಎಂದು ಬಣ್ಣಿಸಿ ಗೆಲ್ಲಿಸುವಂತೆ ಮನವಿ ಮಾಡಿರಲಿಲ್ಲವೇ ಎಂದು ವಿಧಾನಸಭೆ ವಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.

Advertisement

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆಗೆ ಮಾತನಾ ಡಿದ ಅವರು, ಪ್ರಜ್ವಲ್‌ ಇನ್ನೂ ಕಾಂಗ್ರೆಸ್‌- ಜೆಡಿಎಸ್‌ ಮೈತ್ರಿ ಸಂಸದರಾಗಿಯೇ ಇದ್ದಾರೆ. ಅವರು ಈ ಬಾರಿ ಗೆದ್ದು ಎನ್‌ಡಿಎ ಸಂಸದರಾದರೆ ಅವರ ವಿರುದ್ಧ ಪಕ್ಷದ ವತಿಯಿಂದ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದರು.

ಪ್ರಜ್ವಲ್‌ ನಡೆಸಿದ ಮಹಿಳಾ ದೌರ್ಜನ್ಯದ ಘಟನೆಗಳು ಯಾವ ಸಮಯದಲ್ಲಿ ನಡೆದಿದೆ ಎಂಬುದು ಇನ್ನೂ ತನಿಖಾ ತಂಡ ವರದಿ ನೀಡಬೇಕಿದೆ. ನಮ್ಮ ಹೊಂದಾಣಿಕೆಯಲ್ಲಿ ಇನ್ನೂ ಪ್ರಜ್ವಲ್‌ ಗೆದ್ದಿಲ್ಲ. ಗೆದ್ದರೆ ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

2019ರ ಎ. 17ರಂದು ಕಡೂರಿನಲ್ಲಿ ಲೋಕ ಸಭಾ ಚುನಾವಣ ಪ್ರಚಾರದಲ್ಲಿ ಸಿದ್ದರಾಮಯ್ಯನವರು ಪ್ರಜ್ವಲ್‌ ಅವರನ್ನು ಮೈತ್ರಿ ಬಲಪಡಿಸಿ ಎಂದು ಕೋರಿದ್ದರು. ಸಚಿವ ಎಂ.ಬಿ.ಪಾಟೀಲ್‌ ಪಾತಾಳಕ್ಕೆ ಹೋಗುವುದು ಬೇಡ, ಭೂಮಿಯಲ್ಲಿದ್ದಾಗಲೇ ಪ್ರಜ್ವಲ್‌ನನ್ನು ಬಂಧಿಸಬಹುದಿತ್ತು. ಯಾವುದೇ ಕೇಂದ್ರ ಸರಕಾರ ಸಂಸದರಿಗೆ ಸಹಜವಾಗಿಯೇ ರಾಜತಾಂತ್ರಿಕ ಪಾಸ್‌ಪೋರ್ಟ್‌ ನೀಡುತ್ತದೆ. ಅದನ್ನು ಪ್ರಧಾನಿ ನರೇಂದ್ರ ಮೋದಿ ಮಾತ್ರ ನೀಡಿದ್ದಲ್ಲ ಎಂದು ಹೇಳಿದರು.

ರೇವಣ್ಣ ಬಂಧನ ಸರಿಯಾಗಿದೆ
ಕರ್ನಾಟಕದ ಗುಪ್ತಚರ ಇಲಾಖೆ ಸರಿಯಾಗಿ ಇದ್ದಿದ್ದರೆ, ಪ್ರಜ್ವಲ್‌ ತಪ್ಪಿಸಿಕೊಂಡು ಹೋಗುತ್ತಿರಲಿಲ್ಲ. ದೇಶ ಬಿಡಲು ಅವಕಾಶ ನೀಡಬಾರದು ಎಂದು ವಿಮಾನ ನಿಲ್ದಾಣಕ್ಕೆ ಪ್ರಾಧಿಕಾರಕ್ಕೆ ತಿಳಿಸಬಹುದಿತ್ತು. ಶಾಸಕ ರೇವಣ್ಣ ಅವರ ಬಂಧನ ಸರಿಯಾಗಿಯೇ ಇದ್ದು ಅವರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು. ಈಗಾಗಲೇ ಎಚ್‌.ಡಿ.ಕುಮಾರಸ್ವಾಮಿ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಬಿಜೆಪಿಗೂ ಇದಕ್ಕೂ ಸಂಬಂಧವಿಲ್ಲ ಎಂದು ತಿಳಿಸಿದ್ದಾರೆ ಎಂದು ಅಶೋಕ್‌ ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next