Advertisement

ಆಯುಷ್‌ ಆಸ್ಪತ್ರೆ ಸ್ಥಳ ಮಂಜೂರಿಗೆ ಕ್ರಮ

06:09 PM Jul 31, 2022 | Team Udayavani |

ಶಿಡ್ಲಘಟ್ಟ: ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ರೇಷ್ಮೆ ನಗರ ಎಂದು ಖ್ಯಾತಿ ಹೊಂದಿರುವ ಶಿಡ್ಲಘಟ್ಟನಗರದಲ್ಲಿ ಬಡವರಿಗೆ, ಕೂಲಿ ಕಾರ್ಮಿಕರುಸಹಿತ ಎಲ್ಲರಿಗೂ ಅನುಕೂಲ ಕಲ್ಪಿಸುವ ಸಲುವಾಗಿ ಆಯುಷ್‌ ಆಸ್ಪತ್ರೆಯನ್ನುನಿರ್ಮಿಸಲು ಅಗತ್ಯ ಜಮೀನು ಮಂಜೂರು ಮಾಡಲು ಕ್ರಮ ಕೈಗೊಳ್ಳುವುದಾಗಿ ಶಾಸಕ ವಿ.ಮುನಿಯಪ್ಪ ಹೇಳಿದರು.

Advertisement

ನಗರದ ಪ್ರವಾಸಿ ಮಂದಿರದಲ್ಲಿ ಆಯುಷ್‌ ವೈದ್ಯ ಡಾ.ವಿಜಯ್‌ಕುಮಾರ್‌ ಮನವಿಯನ್ನು ಸ್ವೀಕರಿಸಿ ಮಾತನಾಡಿದರು.

ಶಿಡ್ಲಘಟ್ಟ ನಗರದ ವ್ಯಾಪ್ತಿಯಲ್ಲಿ ಸರ್ಕಾರಿ ಜಮೀನು ಲಭ್ಯವಿಲ್ಲದ ಕಾರಣ 5 ಕಿ.ಮೀ.ವ್ಯಾಪ್ತಿಯಲ್ಲಿ ಸೂಕ್ತ ಜಮೀನು ಮಂಜೂರುಮಾಡಲು ತಾಲೂಕು ದಂಡಾಧಿಕಾರಿಗಳಿಗೆಸೂಚನೆ ನೀಡುತ್ತೇನೆ ಎಂದ ಶಾಸಕರು ಇದೇ ವೇಳೆಯಲ್ಲಿ ತಾಲೂಕು ದಂಡಾಧಿಕಾರಿಗಳನ್ನು ಮೊಬೈಲ್‌ ಮೂಲಕ ಸಂಪರ್ಕಿಸಿಆಯುಷ್‌ ಆಸ್ಪತ್ರೆಗೆ ಸೂಕ್ತ ನಿವೇಶನವನ್ನು ಒದಗಿಸಬೇಕು ಎಂದು ಕೋರಿದರು.

ಶಿಡ್ಲಘಟ್ಟ ನಗರದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಲು ಚಿಂತನೆ ನಡೆಸಲಾಗಿತ್ತು ತಾಲೂಕಿನಲ್ಲಿ ಈಗಾಗಲೇ ಪ್ರಾಥಮಿಕಆರೋಗ್ಯ ಕೇಂದ್ರಗಳನ್ನು ಮೇಲ್ದರ್ಜೆಗೇರಿಸಲು ಕ್ರಮಕೈಗೊಳ್ಳಲಾಗಿದೆ. ಜತೆಗೆ ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ವೈದ್ಯರಿಗೆ ಸಕಲ ಸೌಲಭ್ಯಗಳೊಂದಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗಿದೆ. ಶಾಸಕರು ಶಿಡ್ಲಘಟ್ಟದಲ್ಲಿ ಆಯುಷ್‌ ಆಸ್ಪತ್ರೆ ತೀರಾ ಅಗತ್ಯವಾಗಿದ್ದು ಅದನ್ನು ಮಂಜೂರು ಮಾಡಿಸುವುದಾಗಿ ಭರವಸೆ ನೀಡಿದರು.

ಮುಖಂಡ ಸೈಯದ್‌ ಸಲಾಂ, ಕೋಲಾರ ಜಿಪಂ ಮಾಜಿ ಅಧ್ಯಕ್ಷವಿ.ಸುಭ್ರಮಣಿ, ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಮಧುಸೂಧನ್‌.ನಗರಸಭಾ ಸದಸ್ಯ ಕೃಷ್ಣಮೂರ್ತಿ,ರಿಯಾಜ್‌(ರಾಜ್‌ಕುಮಾರ್‌), ಮಾದಿಗದಂಡೋರ ಸಮಿತಿಯ ಮುಖಂಡನರಸಿಂಹಮೂರ್ತಿ, ಬ್ಲಾಕ್‌ ಕಾಂಗ್ರೆಸ್‌ಮೈನಾರಿಟಿ ಘಟಕದ ಅಧ್ಯಕ್ಷ ಸಾಧಿಕ್‌,ಶಿಡ್ಲಘಟ್ಟ ಎಸ್ಟಿ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮುತ್ತೂರು ವೆಂಕಟೇಶ್‌, ಮಳಮಾಚನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷ ರಾಮಾಂಜಿ, ಶಾಸಕರ ಆಪ್ತ ಸಹಾಯಕ ವಿಶ್ವನಾಥ್‌ ಇತರರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next