Advertisement

ಮಕ್ಕಳ ಆರೋಗ್ಯ ರಕ್ಷಣೆಗೆ ಕ್ರಮ: ಬೊಮ್ಮಾಯಿ

08:40 PM Jul 03, 2021 | Team Udayavani |

ಶಿಗ್ಗಾವಿ: ಕೊರೊನಾ 3ನೇ ಅಲೆ ಎದುರಿಸಲು ಬಿಜೆಪಿ ಸರ್ಕಾರ ಸನ್ನದ್ಧವಾಗಿದ್ದು, ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ ಮಕ್ಕಳಿಗೆ 10 ಬೆಡ್‌ ಗಳ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ. ಮಕ್ಕಳ ಆರೋಗ್ಯ ಶಿಬಿರಗಳನ್ನು ಏರ್ಪಡಿಸಿ, ಸೂಕ್ತ ಚಿಕಿತ್ಸೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಪಟ್ಟಣದ ವಾಲ್ಮೀಕಿ ಸಭಾಭವನದಲ್ಲಿ ಕಾರ್ಮಿಕ ಇಲಾಖೆ ಆಶ್ರಯದಲ್ಲಿ ಕಾರ್ಮಿಕರಿಗೆ ದಿನಸಿ ಕಿಟ್‌ ವಿತರಿಸಿ ಮಾತನಾಡಿದರು. ಕೊರೊನಾ 2ನೇ ಅಲೆಯಲ್ಲಿ ಹಗಲಿರುಳು ತಮ್ಮ ಪ್ರಾಣದ ಹಂಗು ತೊರೆದು ಸಾವಿರಾರು ಪ್ರಾಣಗಳನ್ನು ಕಾಪಾಡಿದ ಆರೋಗ್ಯ ಇಲಾಖೆಯ ವೈದ್ಯರು, ಸಿಬ್ಬಂದಿ, ಕಂದಾಯ ಇಲಾಖೆ ಅಧಿ ಕಾರಿಗಳು, ಆಶಾ ಕಾರ್ಯಕರ್ತೆಯರು ಸೇರಿದಂತೆ ಸರ್ವ ಕೊರೊನಾ ಸೇನಾನಿಗಳ ಕಾರ್ಯ ಶ್ಲಾಘನಿಯವಾಗಿದೆ. ಅವರ ಅವಿಸ್ಮರಣೀಯ ನಿಸ್ವಾರ್ಥ ಸೇವೆಯ ಪ್ರತಿಫಲವಾಗಿ ಕೊರೊನಾ ಎರಡನೇ ಅಲೆಯನ್ನು ಧೈರ್ಯದಿಂದ ಎದುರಿಸಲಾಗಿದೆ ಎಂದರು.

ರಾಷ್ಟ್ರೀಯ ವೈದರ ದಿನಾಚಾರಣೆ ಹಾಗೂ ವಿಶ್ವ ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕಿನ ಸರ್ವ ವೈದ್ಯಾ ಧಿಕಾರಿಗಳು ಹಾಗೂ ಪತ್ರಿಕಾ ವರದಿಗಾರ ಮಿತ್ರರಿಗೆ ತುಂಬು ಹೃದಯದ ಅಭಿನಂದನೆ ಸಲ್ಲಿಸುವುದಾಗಿ ಹೇಳಿದರು. ಇಂತಹ ಕೊರೊನಾ ಸಂದೀಗ್ಧ ಸಂದರ್ಭದಲ್ಲೂ ಬಿಜೆಪಿ ಸರ್ಕಾರದ ಅಭಿವೃದ್ಧಿ ಕಾರ್ಯಗಳು ಹರಿಯುವ ನೀರಿನಂತೆ ನಿರಂತರ ನಡೆಯುತ್ತಲೇ ಇವೆ. ಈ ಸಮಯದಲ್ಲಿ ನಮ್ಮ ಸರ್ಕಾರ ತನ್ನ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಾ ಬಂದಿದೆ. ಕೃಷಿ ಮತ್ತು ತೋಟಗಾರಿಗೆ ಬೆಳೆಗಳನ್ನು ಸಂಗ್ರಹಿಸಲು ಕ್ಷೇತ್ರದಲ್ಲಿ ಕೋಲ್ಡ್‌ ಸ್ಟೋರೇಜ್‌ ಸ್ಥಾಪಿಸಿ, ರೈತರಿಗೆ ಅನುಕೂಲ ಕಲ್ಪಿಸಲಾಗುವುದು ಎಂದರು. ಬಂಕಾಪುರ ಆಸ್ಪತ್ರೆಯ ಬೆಡ್‌ಗಳ ಸಂಖ್ಯೆ ಹೆಚ್ಚಿಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಹೆಚ್ಚು ಆಕ್ಸಿಜನ್‌ ಕಾನ್ಸ್‌ಂಟ್ರೇಟರ್‌ ಗಳನ್ನು ಸಂಗ್ರಹಿಸಲಾಗಿದೆ. ತಾಲೂಕಿನಲ್ಲಿ ಸಿಟಿ ಸ್ಕಾ ನಿಂಗ್‌ ಸೆಂಟರ್‌ ಮಾಡಲು ತೀರ್ಮಾನಿಸಲಾಗಿದೆ. ಕ್ಷೇತ್ರದ ಜನತೆಯ ಆಶೀರ್ವಾದದಿಂದ ಪ್ರತಿಫಲವಾಗಿ ನನಗೆ ಲಭಿಸಿರುವ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸುತ್ತಾ ಬಂದಿದ್ದೇನೆ. ಕ್ಷೇತ್ರದ ಜನರ ಪ್ರಾಣ ರಕ್ಷಣೆ ನನ್ನ ಹೊಣೆಯಾಗಿದೆ. ಅವಶ್ಯಕತೆ ಬಿದ್ದರೆ ನನ್ನ ಮನೆಯನ್ನೂ ಕೋವಿಡ್‌ ಸೆಂಟರ್‌ ಆಗಿ ಪರಿವರ್ತಿಸಿ ಜನರಿಗೆ ಅನಕೂಲ ಕಲ್ಪಿಸುತ್ತೇನೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಕಾರ್ಮಿಕ ವರ್ಗದವರಿಗೆ ದಿನಸಿ ಕಿಟ್‌ಗಳನ್ನು ವಿತರಿಸಲಾಯಿತು. ವೈದ್ಯರ ಹಾಗೂ ಪತ್ರಿಕಾ ದಿನಾಚರಣೆ ಅಂಗವಾಗಿ ತಾಲೂಕಿನ ವೈದ್ಯರು ಹಾಗೂ ಸರ್ವ ವರದಿಗಾರರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಪವಿಭಾಗಾಧಿ ಕಾರಿ ಅನ್ನಪೂರ್ಣ ಮುದುಕಮ್ಮನವರ, ಬಿಜೆಪಿ ತಾಲೂಕು ಅಧ್ಯಕ್ಷ ಶಿವಾನಂದ ಮ್ಯಾಗೇರಿ, ತಾಪಂ ಉಪಾಧ್ಯಕ್ಷೆ ವಿಜಯಲಕ್ಷ್ಮಿ ಮುಂದಿನಮನಿ, ಪುರಸಭೆ ಅಧ್ಯಕ್ಷ ಶ್ರೀಕಾಂತ ಬುಳ್ಳಕ್ಕನವರ, ಉಪಾಧ್ಯಕ್ಷ ಮಂಜುನಾಥ ಬ್ಯಾಹಟ್ಟಿ, ಮುಖಂಡರಾದ ವೀರೇಶ ಆಜೂರ, ನಿಂಗಣ್ಣ ಹರಿಜನ ಸೇರಿದಂತೆ ತಾಲೂಕಿನ ಅಧಿ  ಕಾರಿಗಳು, ಜನಪ್ರತಿನಿಧಿ ಗಳು, ಕಾರ್ಮಿಕ ಇಲಾಖೆ ಅ ಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next