Advertisement
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ 2022-23 ನೇ ಸಾಲಿನ ಬಜೆಟ್ ನಲ್ಲಿ ‘ಶ್ರವಣ ದೋಷ ಮುಕ್ತ ಕರ್ನಾಟಕ”ನಿರ್ಮಾಣ ಮಾಡುವ ಘೋಷಣೆ ಮಾಡಿದ್ದು, ಈ ಯೋಜನೆ ಕುರಿತು ಸಚಿವರು ಪ್ರಗತಿ ಪರಿಶೀಲನೆ ನಡೆಸಿ ಮಾಹಿತಿ ನೀಡಿದರು.
Related Articles
Advertisement
ಸರ್ಕಾರದಿಂದ ಉಚಿತವಾಗಿ ಚಿಕಿತ್ಸೆ ನೀಡುತ್ತಿದ್ದು, ಶಸ್ತ್ರಚಿಕಿತ್ಸೆಗೆ ನೆರವಾಗುವ ಆಶಾ ಕಾರ್ಯಕರ್ತೆಯರಿಗೆ 250 ರೂ. ಗೌರವಧನ ನೀಡಲಾಗುತ್ತಿದೆ. ಇಂತಹ ಶಸ್ತ್ರ ಚಿಕಿತ್ಸೆಯನ್ನು ಕೆ.ಸಿ. ಜನರಲ್ ಆಸ್ಪತ್ರೆ, ಇಂದಿರಾಗಾಂಧಿ ಮಕ್ಕಳ ಸಂಸ್ಥೆ, ಬೌರಿಂಗ್ ಮತ್ತು ಲೇಡಿ ಕರ್ಜನ್ ಆಸ್ಪತ್ರೆ, ಬೆಂಗಳೂರು ಮೆಡಿಕಲ್ ಕಾಲೇಜು – ಬಿಎಂಸಿಆರ್ ಐ, ಹುಬ್ಬಳ್ಳಿಯ ಕಿಮ್ಸ್ ಸೇರಿದಂತೆ 20 ಆಸ್ಪತ್ರೆಗಳಲ್ಲಿ ಸುಸಜ್ಜಿತ ಶಸ್ತ್ರಚಿಕಿತ್ಸೆಗೆ ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಇನ್ನಷ್ಟು ಆಸ್ಪತ್ರೆಗಳನ್ನು ಉಚಿತ ಶಸ್ತ್ರಚಿಕಿತ್ಸೆಗಾಗಿ ಸೇರ್ಪಡೆ ಮಾಡಲಾಗುವುದು ಎಂದು ಹೇಳಿದರು.
ಕಿವುಡುತನ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ರಾಷ್ಟ್ರೀಯ ಕಾರ್ಯಕ್ರಮ (ಎನ್.ಪಿ.ಪಿ.ಸಿ.ಡಿ.)ದಡಿ ಕಾರ್ಯನಿರ್ವಹಿಸುವ ಶ್ರವಣಶಾಸ್ತ್ರ ತಂಡಗಳು ರಾಷ್ಟ್ರೀಯ ಬಾಲ ಸುರಕ್ಷಾ ಕಾರ್ಯಕ್ರಮ (ಆರ್.ಬಿ.ಎಸ್.ಕೆ.)ದಡಿ ಸಂಚಾರಿ ಆರೋಗ್ಯ ತಂಡಗಳ ಸಹಯೋಗದೊಂದಿಗೆ ಫಲಾನುಭವಿಗಳನ್ನು ಗುರುತಿಸಲಾಗುತ್ತದೆ. ಗುರುತಿಸಲಾದ ಅರ್ಹ ಮಕ್ಕಳನ್ನು ಹೆಚ್ಚಿನ ಮೌಲ್ಯಮಾಪನ ಮತ್ತು ನಿರ್ವಹಣೆಗಾಗಿ ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಆಸ್ಪತ್ರೆಗಳಿಗೆ ಕಳುಹಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.
62 ಮಕ್ಕಳಿಗೆ ಶಸ್ತ್ರಚಿಕಿತ್ಸೆ
ರಾಜ್ಯದಲ್ಲಿ ಪ್ರಸ್ತುತ ಇಂತಹ 652 ಮಕ್ಕಳನ್ನು ಗುರುತಿಸಿದ್ದು, ಈ ಪೈಕಿ 586 ಮಕ್ಕಳು ವಿವಿಧ ಹಂತಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈವರೆಗೆ 62 ಮಕ್ಕಳಿಗೆ ಶಸ್ತ್ರಚಿಕಿತ್ಸೆ ಮಾಡಿದ್ದು, 258 ಮಕ್ಕಳ ಮೇಲೆ ನಿಗಾ ವಹಿಸಲಾಗಿದೆ. 142 ಮಕ್ಕಳು ಶ್ರವಣ ಸಾಧನ ಅಳವಡಿಕೆ ಚಿಕಿತ್ಸೆ ಪಡೆಯುತ್ತಿವೆ ಎಂದು ಸಚಿವರು ಮಾಹಿತಿ ನೀಡಿದರು.