Advertisement

ಕೊರೊನಾ 2ನೇ ಅಲೆ ನಿಯಂತ್ರಣಕ್ಕೆ ಕ್ರಮ : ಆರೋಗ್ಯ ಸಿಬಂದಿಗೆ 50 ದಿನ ರಜೆ ಇಲ್ಲ

12:47 AM Mar 19, 2021 | Team Udayavani |

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಿಸುವ ನಿಟ್ಟಿನಲ್ಲಿ 50 ದಿನಗಳ ವರೆಗೆ ವೈದ್ಯ ಸಿಬಂದಿ, ಅಧಿಕಾರಿಗಳಿಗೆ ರಜೆ ಇಲ್ಲ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಹೇಳಿದರು.

Advertisement

ನನ್ನ ಸಹಿತ ಆರೋಗ್ಯ ಇಲಾಖೆ ಅಧಿಕಾರಿಗಳು, ಕೊರೊನಾ ನಿಯಂತ್ರಣ ಕೆಲಸದಲ್ಲಿರುವ ಎಲ್ಲ ವೈದ್ಯರು, ಸಿಬಂದಿಗೆ ರಜೆ ಇಲ್ಲ. ಶ್ರಮಪಟ್ಟು ಕೆಲಸ ಮಾಡಿ ನಮ್ಮ ರಾಜ್ಯವನ್ನು ಕೊರೊನಾ ಮುಕ್ತ ರಾಜ್ಯವಾಗಿ ಮಾಡೋಣ ಎಂದು ಕೋವಿಡ್‌ ನಿಯಂತ್ರಣ ಸಂಬಂಧ ಗುರುವಾರ ಆಸ್ಪತ್ರೆಗಳ ಮುಖ್ಯಸ್ಥ ರೊಂದಿಗೆ ವಿಧಾನಸೌಧದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಅವರು ಹೇಳಿದರು.

ಬೆಂಗಳೂರಿನಲ್ಲಿ 200 ಆ್ಯಂಬುಲೆನ್ಸ್‌ ನಿಯೋಜಿಸಲಾಗಿದೆ. ಎಲ್ಲ ಮಾಹಿತಿ ತತ್‌ಕ್ಷಣ ದೊರೆಯಲು ರಿಯಲ್‌ ಟೈಮ್‌ ವ್ಯವಸ್ಥೆ ಮಾಡಲಾಗುತ್ತಿದೆ. ಗೃಹ ವೈದ್ಯರು, ಅರೆವೈದ್ಯಕೀಯ ಸಿಬಂದಿಯ ನೇಮಕವನ್ನು ತಾತ್ಕಾಲಿಕವಾಗಿ ಮಾಡಲು ತೀರ್ಮಾ ನಿಸಲಾಗಿದೆ. ಇದೇ ವಾರದಲ್ಲಿ ಖಾಸಗಿ ಆಸ್ಪತ್ರೆಗಳ ಮುಖ್ಯಸ್ಥರೊಂದಿಗೆ ಸಭೆ ನಡೆಸಲಾಗುವುದು. ಎರಡನೇ ಅಲೆಯ ವೇಳೆ ರೋಗಿಗಳ ಸಂಖ್ಯೆ ಹೆಚ್ಚಾದರೆ ಖಾಸಗಿ ಆಸ್ಪತ್ರೆಗಳ ಸಹಾಯ ಬೇಕಾಗುತ್ತದೆ. ಯಾವುದೇ ಸಂಸ್ಥೆಯಲ್ಲಿ ಲೋಪ ಕಂಡು ಬಂದರೆ ಆಯಾ ಮುಖ್ಯಸ್ಥರನ್ನೇ ಹೊಣೆ ಮಾಡಲಾಗುವುದು ಎಂದು ತಿಳಿಸಿದರು.

ಬೆಂಗಳೂರಿನಲ್ಲಿ ಒಟ್ಟು 1,000 ಹಾಸಿಗೆಗಳ ಕೋವಿಡ್‌ ಕೇರ್‌ ಸೆಂಟರ್‌ ನಿರ್ಮಿಸಿದ್ದು, ಸೋಮವಾರ ದಿಂದ ಕಾರ್ಯ ನಿರ್ವ ಹಿಸಲಿದೆ. ಕೋವಿಡ್‌ ಲಸಿಕೆ ವ್ಯರ್ಥ ವಾಗುವುದಕ್ಕೆ ಸಂಬಂಧಿಸಿ ಸರಿಯಾದ ಮಾಹಿತಿ ನೀಡಲು, ಪ್ರತೀ ದಿನ ವರದಿ ನೀಡಲು ಸೂಚಿಸಲಾಗಿದೆ ಎಂದರು.

ಮೊದಲ ಬಾರಿ ಕೊರೊನಾ ಬಂದಾಗ ಸರಿಯಾದ ಮಾಹಿತಿ, ಜ್ಞಾನ ಇರಲಿಲ್ಲ. ಅದನ್ನು ಯಶಸ್ವಿಯಾಗಿ ನಿಯಂತ್ರಣಕ್ಕೆ ತರಲಾಗಿದೆ. ಎರಡನೇ ಅಲೆ ಬರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗ ನಮ್ಮ ಬಳಿ ಲಸಿಕೆಯೂ ಇದೆ. ಹಾಗಾಗಿ ಹೆಚ್ಚು ಜನರು ಲಸಿಕೆ ಹಾಕಿಸಿಕೊಳ್ಳಬೇಕು ಮತ್ತು ತಪ್ಪದೆ ಸುರಕ್ಷಾ ಕ್ರಮ ಪಾಲಿಸಬೇಕು ಎಂದರು.

Advertisement

ಲಸಿಕೆ ಮುಖ್ಯ
ಎರಡನೇ ಅಲೆ ಭೀತಿ ಸಂದರ್ಭದಲ್ಲಿ ಲಸಿಕೆ ಮುಖ್ಯ. ಕೆಲವು ದಿನಗಳಿಂದ ಒಂದೇ ದಿನ ಎರಡೂವರೆ ಲಕ್ಷ ಲಸಿಕೆ ನೀಡಲಾಗಿದೆ. ಪ್ರತೀ ದಿನ ಮೂರು ಲಕ್ಷ ಮಂದಿಗೆ ಲಸಿಕೆ ನೀಡುವ ಗುರಿ ನಿಗದಿಪಡಿಸಲಾಗಿದೆ. 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ, 45 ವರ್ಷ ಮೇಲ್ಪಟ್ಟ ರೋಗಿಗಳಿಗೆ ಲಸಿಕೆ ಹಾಕಿಸಬೇಕು. ಈ ಮೂಲಕ 2ನೇ ಅಲೆ ತಡೆಯಬೇಕು ಎಂದು ಸಚಿವ ಸುಧಾಕರ್‌ಮನವಿ ಮಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next