Advertisement

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

11:49 AM Nov 24, 2024 | Team Udayavani |

ಬೆಂಗಳೂರು: ನಗರದಲ್ಲಿ ಗೂಂಡಾ ಪ್ರವೃತ್ತಿ ತೋರಿದರೆ ಅಂತವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ನಗರ ಪೊಲೀಸ್‌ ಆಯುಕ್ತ ಬಿ.ದಯಾನಂದ ಎಚ್ಚರಿಸಿದ್ದಾರೆ.

Advertisement

ಕುಮಾರಸ್ವಾಮಿ ಲೇಔಟ್‌ನ ದಯಾನಂದ ಸಾಗರ್‌ ಕಾಲೇಜು ಆವರಣದಲ್ಲಿ ಶನಿವಾರ ನಡೆದ ಮಾಸಿಕ ಜನಸಂಪರ್ಕ ಸಭೆಯಲ್ಲಿ ಅಹವಾಲು ಸ್ವೀಕರಿಸಿ ಮಾತನಾಡಿದರು. ಸಾರ್ವಜನಿಕ ಸ್ಥಳಗಳಲ್ಲಿ ಗೂಂಡಾಗಳ ವರ್ತನೆ ಮೀತಿ ಮೀರಿದ್ದು, ಅಂತವರಿಗೆ ಕಡಿವಾಣ ಹಾಕಬೇಕು ಎಂದು ಸಾರ್ವಜನಿಕರು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯೆ ನೀಡಿದ ನಗರ ಪೊಲೀಸ್‌ ಆಯುಕ್ತರು, ಸಾರ್ವಜನಿಕ ಸ್ಥಳಗಳಲ್ಲಿ ಗೂಂಡಾ ವರ್ತನೆ ಘಟನೆಗಳ ಸಂಬಂಧ ಸ್ಥಳೀಯ ಪೊಲೀಸ್‌ ಠಾಣೆಗೆ ದೂರು ನೀಡಿದರೆ, ಅಂತವರ ವಿರುದ್ಧ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಪುಟ್ಟೇನಹಳ್ಳಿ, ಕುಮಾರಸ್ವಾಮಿ ಲೇಔಟ್‌, ಬನಶಂಕರಿ ಸೇರಿ ವಿವಿಧೆಡೆ ಡ್ರಗ್ಸ್‌ ಹಾವಳಿ ಹೆಚ್ಚಾಗಿದೆ. ಡ್ರಗ್ಸ್‌ ಹಾವಳಿ ತಡೆಗೆ ಕಠಿಣ ಕ್ರಮ ಕೈಗೊಳ್ಳುವಂತೆ ಕೆಲ ಸಂಘಟನೆಗಳ ಮುಖಂಡರು ಮನವಿ ಮಾಡಿದರು. ಅದಕ್ಕೆ ಪ್ರತಿಕ್ರಿಯಿಸಿದ ನಗರ ಪೊಲೀಸ್‌ ಆಯುಕ್ತರು, ನಗರದಲ್ಲಿ ಡ್ರಗ್ಸ್‌ ತಡೆಗೆ ಎಲ್ಲಾ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದರು.

ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್‌ ಜಗಲಸಾರ್‌, ಸಂಚಾರ ವಿಭಾಗದ ಡಿಸಿಪಿ ಶಿವಪ್ರಕಾಶ್‌ ದೇವರಾಜು ಇತರರಿದ್ದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next