Advertisement

ಮರಳು ಅಕ್ರಮ ತಡೆಗೆ ಕ್ರಮ

01:28 PM Aug 31, 2019 | Team Udayavani |

ತುಮಕೂರು: ರಾಜ್ಯದಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗೆ ಅಧಿಕಾರಿಗಳು ದಕ್ಷತೆ ಹಾಗೂ ಪ್ರಾಮಾಣಿಕವಾಗಿ ಕೆಲಸ ಮಾಡು ವಂತೆ ಸೂಚಿಸಿದ್ದೇನೆ. ಅಕ್ರಮ ಗಣಿಗಾರಿಕೆ ನಡೆಯಲು ಬಿಡುವುದಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಸಿ.ಸಿ ಪಾಟೀಲ್ ತಿಳಿಸಿದರು.

Advertisement

ಶ್ರೀ ಕ್ಷೇತ್ರ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಲಿಂ.ಡಾ. ಶ್ರೀ ಶಿವಕುಮಾರ ಸ್ವಾಮೀಜಿಗಳ ಗದ್ದುಗೆಗೆ ಪೂಜೆ ಸಲ್ಲಿಸಿ ಸಿದ್ಧಗಂಗಾ ಮಠಾಧ್ಯಕ್ಷ ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು ಮಾಧ್ಯಮದವ ರೊಂದಿಗೆ ಮಾತನಾಡಿದರು.

ನ್ಯೂನ್ಯತೆ ಸರಿಪಡಿಸುತ್ತೇನೆ: ಅಕ್ರಮವಾಗಿ ಮರಳು ಸಾಗಾಟ ತಡೆಯಲು ಕ್ರಮ ಕೈಗೊಳ್ಳುವಂತೆ ಈಗಾಗಲೇ ಅಧಿಕಾರಿಗಳಿಗೆ ತಿಳಿಸಿದ್ದೇನೆ. ಖಾತೆಗೆ ಸಂಬಂಧಿಸಿದ ವಿಷಯದಲ್ಲಿ ಯಾವುದೇ ನ್ಯೂನ್ಯತೆಗಳಿದ್ದರೂ ಮುಂದಿನ ದಿನಗಳಲ್ಲಿ ಸರಿ ಪಡಿಸುತ್ತೇನೆ ಎಂದರು.

ನಮ್ಮ ಸರ್ಕಾರ ಉತ್ತಮ ಕೆಲಸ ಮಾಡುತ್ತದೆ. ಈ ಹಿಂದಿನ ಸರ್ಕಾರಕ್ಕಿಂತ ನಮ್ಮ ಸರ್ಕಾರ ಉತ್ತಮವಾಗಿ ಆಡಳಿತ ನಡೆಸಲಿದೆ. ಅದಕ್ಕೆ ಶ್ರೀಗಳ ಆಶೀರ್ವಾದ ಪಡೆಯಲು ಬಂದಿದ್ದೇನೆ ಎಂದು ಹೇಳಿದರು.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ: ಖಾತೆ ಹಂಚಿಕೆಯಾದ ನಂತರ ಅಧಿಕಾರಿಗಳ ಸಭೆ ನಡೆಸಿ ಇಲಾಖೆ ಮಾಹಿತಿ ಪಡೆದು ಕೊಂಡಿದ್ದೇನೆ. ನನ್ನ ಮತ ಕ್ಷೇತ್ರವಾದ ಗದಗ ಜಿಲ್ಲೆಯ ನರಗುಂದ ಕ್ಷೇತ್ರದಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಅಲ್ಲಿಯ ಜನರ ಸಂಕಷ್ಟ ಆಲಿಸಿದ್ದೇನೆ. ಅಗತ್ಯ ಸೌಲಭ್ಯ ಕಲ್ಪಿಸಲು ಒತ್ತು ನೀಡಿದ್ದೆ. ಈಗಾಗಲೇ ಅಲ್ಲಿ ಸಾಕಷ್ಟು ಕಾಮಗಾರಿ ಮಾಡಲಾಗುತ್ತಿದೆ ಎಂದು ತಿಳಿಸಿದರು.

Advertisement

ರಾಜ್ಯದ ಪ್ರವಾಹ ಪೀಡಿತರ ನೋವಿಗೆ ಸರ್ಕಾರ ಪರಿಹಾರ ನೀಡುವ ಕೆಲಸ ಮಾಡು ತ್ತಿದೆ. ಶ್ರೀ ಸಿದ್ಧಲಿಂಗ ಸ್ವಾಮೀಜಿ ಆಶೀರ್ವಾದ ಪಡೆದು ಖಾತೆಯನ್ನು ಯಶಸ್ವಿಯಾಗಿ ನಡೆಸಲು ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದು ತಿಳಿಸಿದರು.

ಅಭಿವೃದ್ಧಿಗೆ ಶ್ರಮಿಸುತ್ತೇನೆ: ಯಡಿಯೂರಪ್ಪ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸದ ದಿನದಿಂದ ಪ್ರವಾಹ ಪೀಡಿತ ಕ್ಷೇತ್ರಗಳಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ನಿರ್ದೇಶನ ನೀಡುವುದರ ಜೊತೆಗೆ ಸೂಕ್ತ ಅನುದಾನ ನೀಡಿದ್ದಾರೆ. ರಾಜ್ಯದ ಅಭಿವೃದ್ಧಿಗೆ ಅವರಿಗೆ ಹೆಗಲು ಕೊಟ್ಟು ಶ್ರಮಿಸುತ್ತೇನೆ ಎಂದು ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಜಿ.ಬಿ. ಜ್ಯೋತಿಗಣೇಶ್‌, ಆಪ್ತ ಕಾರ್ಯದರ್ಶಿ ವಿರೂಪಾಕ್ಷ, ಓಂಕಾರೇಶ್ವರಿ, ಡಿಡಿ ಪದ್ಮಜ, ಬಿಜೆಪಿ ಮುಖಂಡರಾದ ರವಿ ಹಬ್ಟಾಕ, ಬಾವಿಕಟ್ಟೆ ನಾಗಣ್ಣ, ಚಂದ್ರಮೌಳಿ, ನಿಟ್ಟೂರು ಬಾಬು, ಕುಮಾರ್‌ ಮತ್ತಿತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next