ಬೆಂಗಳೂರು : ಕೋವಿಡ್ ನಿಯಂತ್ರಿಸುವ ಹಿನ್ನೆಲೆಯಲ್ಲಿ ಜಾರಿಗೊಳಿಸಲಾಗಿರುವ ಈ ಲಾಕ್ ಡೌನ್ ನಿಂದಾಗಿ ತೊಂದರೆಯಾಗುವ ಅರ್ಹ ಆಟೋ-ಟ್ಯಾಕ್ಸಿ ಮತ್ತು ಮ್ಯಾಕ್ಸಿ ಕ್ಯಾಬ್ ಚಾಲಕರಿಗೆ ತಲಾ ಮೂರು ಸಾವಿರ ರೂಪಾಯಿಯಷ್ಟು ಆರ್ಥಿಕ ಸಹಾಯ ನೀಡಲು ನಮ್ಮ ಸರ್ಕಾರವು ನಿರ್ಧರಿಸಿದಂತೆ ಸಾರಿಗೆ ಇಲಾಖೆಯಿಂದ ಈ ಪರಿಹಾರ ವಿತರಿಸಲು ವ್ಯವಸ್ಥೆ ಮಾಡಲಾಗಿದೆ ಎಂದು ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದ್ದಾರೆ.
ಅರ್ಹ ಅಭ್ಯರ್ಥಿಗಳು ಸೇವಾ ಸಿಂಧು ವೆಬ್ ಪೋರ್ಟಲ್ ಮೂಲಕ ಸೂಕ್ತ ದಾಖಲೆಗಳನ್ನು ಒದಗಿಸಿ ಈ ಪರಿಹಾರ ಧನ ಪಡೆದುಕೊಳ್ಳಲು ಅರ್ಜಿ ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ.
ನಾಳೆ (ಮೇ 27) ಮಧ್ಯಾಹ್ನದಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆ ಪ್ರಾರಂಭವಾಗುವುದು. ಹೀಗೆ ಅರ್ಜಿ ಸಲ್ಲಿಸಿದ ಸೂಕ್ತ ಫಲಾನುಭವಿಗಳ ಅಕೌಂಟ್ ಗಳಿಗೆ ನೇರವಾಗಿ ಈ ಪರಿಹಾರ ಧನವನ್ನು ವರ್ಗಾಯಿಸಲಾಗುವುದು. ಬಡ ಚಾಲಕರ ನೆರವಿಗೆ ಮುಂದಾಗಿರುವ ನಮ್ಮ ಸರ್ಕಾರದ ಸೌಲಭ್ಯವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.
ಇದನ್ನೂ ಓದಿ : ಕೃಷಿಯಲ್ಲಿ ಖುಷಿ ಕಂಡ ನಟಿ ಆಶಿಕಾ ರಂಗನಾಥ್
ಕಳೆದ ಬಾರಿಯೂ ಲಾಕ್ ಡೌನ್ ಘೋಷಿಸಿದ ಸಂದರ್ಭದಲ್ಲಿ ಸಾರಿಗೆ ಇಲಾಖೆಯಿಂದ ಲಕ್ಷಾಂತರ ಮಂದಿ ಅರ್ಹ ಚಾಲಕರಿಗೆ ಪರಿಹಾರಧನವನ್ನು ವಿತರಿಸಲಾಗಿತ್ತು ಎಂಬುದನ್ನು ಈ ಸಂದರ್ಭದಲ್ಲಿ ಸ್ಮರಿಸಬಹುದಾಗಿದೆ ಎಂದರು