Advertisement

Forest land ಪ್ರಕರಣ ತ್ವರಿತ ಇತ್ಯರ್ಥಕ್ಕೆ ಕ್ರಮ : ಈಶ್ವರ ಖಂಡ್ರೆ

01:09 AM Dec 21, 2023 | Team Udayavani |

ದಾವಣಗೆರೆ: ಅರಣ್ಯ ಭೂಮಿಗೆ ಸಂಬಂಧಿಸಿದ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಮತ್ತು ರೈತರಿಗೆ ಆಗುತ್ತಿರುವ ತೊಂದರೆ ತಪ್ಪಿಸಲು ಹೆಚ್ಚುವರಿ ಫಾರೆಸ್ಟ್‌ ಸೆಟಲ್ಮೆಂಟ್‌ ಅಧಿಕಾರಿ (ಎಸ್‌.ಎಫ್‌.ಒ.)ಗಳನ್ನು ನಿಯೋಜಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದರು.

Advertisement

ಬುಧವಾರ ದಾವಣಗೆರೆಯಲ್ಲಿ ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ ಮತ್ತು ಕೊಪ್ಪಳ ಅರಣ್ಯ ವಿಭಾಗದ ಪ್ರಗತಿ ಪರಿಶೀಲನ ಸಭೆ ನಡೆಸಿ ಅವರು ಮಾತನಾಡಿದರು. 25-30 ವರ್ಷಗಳಿಂದ ಅರಣ್ಯಕ್ಕೆ ಸಂಬಂಧಿಸಿದ ಹಲವು ಪ್ರಕರಣಗಳು ಇತ್ಯರ್ಥ ಆಗದೆ ಉಳಿದಿದ್ದು, ಇದರಿಂದಾಗಿ ಬಡವರು ಸರಕಾರದ ಸೌಲಭ್ಯಗಳಿಂದ ವಂಚಿತರಾಗಿದ್ದಾರೆ. 3 ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡವರಿಗೆ ತ್ವರಿತವಾಗಿ ನ್ಯಾಯ ಕೊಡಿಸುವಂತೆ ಮತ್ತು 1978ಕ್ಕೆ ಮುನ್ನ ಅರಣ್ಯದಲ್ಲಿದ್ದವರಿಗೆ ಅರಣ್ಯ ಹಕ್ಕು ಕೊಡಿಸಲು ಮುಂದಾಗಲಾಗುವುದು ಎಂದರು.
ಅರಣ್ಯ ಮತ್ತು ಸರಕಾರಿ ಭೂಮಿ ಒತ್ತುವರಿ ತಡೆಯಲು ತೀರುವಳಿ ಭೂಮಿಯಲ್ಲಿ ಮರಗಳನ್ನು ಬೆಳೆಸಲು ಮತ್ತು ಆದ್ಯತೆ ಮೇಲೆ ಮೀಸಲು ಅರಣ್ಯ ಎಂದು ಘೋಷಿಸುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಪ್ರಸ್ತುತ ದಾವಣಗೆರೆ ವೃತ್ತದಲ್ಲಿರುವ 32 ಸಾವಿರ ಹೆಕ್ಟೇರ್‌ ಪರಿಭಾವಿತ ಅರಣ್ಯದಲ್ಲಿ ವಸತಿ ಪ್ರದೇಶ, ದೇವಸ್ಥಾನ, ಶ್ಮಶಾನಭೂಮಿ, ಅಂಗನವಾಡಿ, ಆಸ್ಪತ್ರೆ ಇತ್ಯಾದಿಗಳಿದ್ದರೆ, ಅವುಗಳನ್ನು ಕೈಬಿಡಲು ಮತ್ತು ಅದಕ್ಕೆ ಪರ್ಯಾಯವಾಗಿ ಭೂಮಿ ಗುರುತಿಸಿ ಸುಪ್ರೀಂಕೋರ್ಟ್‌ ಗೆ ಮಧ್ಯಂತರ ವರದಿ ಸಲ್ಲಿಸಲು ಮತ್ತು ಕೇಂದ್ರ ಸರಕಾರಕ್ಕೆ ಈ ಬಗ್ಗೆ ಪ್ರಸ್ತಾವನೆ ಕಳುಹಿಸಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಸೂಚಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next