Advertisement

ಅಧಿವೇಶನದ ಬಳಿಕ ಪ್ರವಾಹ ಸಂತ್ರಸ್ತರ ಪರಿಹಾರಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

08:51 PM Sep 16, 2021 | Team Udayavani |

ಬೆಳಗಾವಿ: ಈ  ಅಧಿವೇಶನ ಮುಗಿದ ಬಳಿಕ ಜಿಲ್ಲೆಯ ಬಾಕಿ ಉಳಿದಿರುವ ಪ್ರವಾಹ ಸಂತ್ರಸ್ತರಿಗೆ ಪರಿಹಾರ ದೊರಕಿಸಿಕೊಡಲು ಕ್ರಮಕೈಗೊಳ್ಳಲಾಗುವದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಅಧಿವೇಶನ ಮುಗಿದ ನಂತರ ಜಿಲ್ಲಾಡಳಿತ ಹಣಕಾಸು ಇಲಾಖೆ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಜೊತೆಗೆ ಸಭೆ ನಡೆಸಿ ಬಾಕಿ ಇರುವ ಸಂತ್ರಸ್ತರಿಗೆ ಪರಿಹಾರ ವಿತರಿಸಲಾಗುವದು ಎಂದರು.

ಜಿಲ್ಲೆಯಲ್ಲಿ ಪ್ರವಾಹದಿಂದ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲೆಯಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಿ ಜಿಲ್ಲಾಡಳಿತಕ್ಕೆ ಕೆಲವು ಸಲಹೆ ಸೂಚನೆ ನೀಡಲಾಗಿತ್ತು. ಇದೆಲ್ಲವನ್ಮು ಪರಿಶೀಲಿಸಿ ಆದಷ್ಡು ಬೇಗ ಸಂತ್ರಸ್ತರಿಗೆ ಪರಿಹಾರ ವಿತರಿಸಲು ಕ್ರಮಕೈಗೊಳ್ಳಲಾಗುವದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next