Advertisement

Kalaburagi ಜಿಲ್ಲೆಯ ಕೆರೆಗಳ ಪುನರುಜ್ಜೀವನಕ್ಕೆ ಕ್ರಮ: ಸಚಿವ ಪ್ರಿಯಾಂಕ್ ಖರ್ಗೆ

11:54 AM Mar 07, 2024 | Team Udayavani |

ಕಲಬುರಗಿ: ನಗರದ ಅಪ್ಪನ ಕೆರೆ ಸೇರಿದಂತೆ ಜಿಲ್ಲೆಯ ಕೆರೆಗಳ ಪುನರುಜ್ಜೀವನ ಮಾಡುವ ಕೆಲಸವನ್ನು ಆದ್ಯತೆಯ ಮೇರೆಗೆ ಕೈಗೆತ್ತಿಕೊಳ್ಳಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್, ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.

Advertisement

ನಗರದಲ್ಲಿ ಗುರುವಾರ ನವೀಕರಣಗೊಂಡ ಅಪ್ಪನ‌ಕೆರೆ ಉದ್ಯಾನವನ ಉದ್ಘಾಟಿಸಿ ಅವರು ಮಾತನಾಡುತ್ತಿದ್ದರು.

ಕೋವಿಡ್ ಸಂಧರ್ಭದಲ್ಲಿ ಬಂದ್ ಮಾಡಲಾಗಿದ್ದ ಅಪ್ಪನ ಕೆರೆಯನ್ನು ಪ್ರಾದೇಶಿಕ ಆಯುಕ್ತರ ವಿಶೇಷ ಆಸಕ್ತಿಯಿಂದಾಗಿ ಈಗ ಉದ್ಯಾನವನ್ನು ನವೀಕರಣಗೊಳಿಸಲಾಗಿದೆ. ಇದು ಸಾರ್ವಜನಿಕರ ಆಸ್ತಿ ಇದನ್ನು ಜವಾಬ್ದಾರಿಯುತವಾಗಿ ಉಳಿಸಿ ಬೆಳೆಸಿ ಮುಂದಿನ ಪೀಳಿಗೆಗಾಗಿ ರಕ್ಷಿಸಬೇಕು ಎಂದು ಸಾರ್ವಜನಿಕರಲ್ಲಿ‌ ಮನವಿ ಮಾಡಿದರು.

ಕಲಬುರಗಿ, ಬೀದರ್ ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಇನ್ಮೂ ಹೆಚ್ಚು ಹಾಲು ಉತ್ಪಾದನೆಗೆ ಪ್ರೋತ್ಸಾಹ ನೀಡಲು ತಾವು ಅಗತ್ಯ ಸಹಕಾರ ನೀಡಲು ಸಿದ್ದವಿರುವುದಾಗಿ ಸಚಿವರು ಹೇಳಿದರು.

ಈ ಸಂದರ್ಭದಲ್ಲಿ ಸಚಿವರು ಎಮ್ಮೆ ಹಾಲಿನ ನೂತನ ಪ್ಯಾಕೆಟ್ ಬಿಡುಗಡೆ ಮಾಡಿದರು. ಜೊತೆಗೆ ಅಪ್ಪನ ಕರೆಯ ಕುರಿತಾದ ವಿಡಿಯೋವನ್ನು ಬಿಡುಗಡೆಗೊಳಿಸಿದರು.

Advertisement

ವೇದಿಕೆಯ ಮೇಲೆ ಸಿಎಂ ರಾಜಕೀಯ ಕಾರ್ಯದರ್ಶಿ ಬಿ.ಆರ್.ಪಾಟೀಲ್, ಅರೋಗ್ಯ ಸಚಿವ ದಿನೇಶ್ ಗುಂಡೂರಾವ್, ಶಾಸಕರಾದ ಅಜಯ ಸಿಂಗ್, ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಪ್ರಾದೇಶಿಕ ಆಯುಕ್ತ ಕೃಷ್ಣ ಭಾಜಪೇಯಿ, ಜಿಲ್ಲಾಧಿಕಾರಿ ಪೌಜಿಯಾ ತರನ್ನುಮ್, ಮಹಾನಗರ ಪಾಲಿಕೆ ಕಮೀಷನರ್ ಭುವನೇಶ ಪಾಟೀಲ, ಜಿಡಿಎ ಅಧ್ಯಕ್ಷ ಮಜರ್ ಖಾನ್, ಕಲಬುರಗಿ, ಬೀದರ್ ಯಾದಗಿರಿ ಹಾಲು ಒಕ್ಕೂಟ ಅಧ್ಯಕ್ಷ ಆರ್.ಕೆ.ಪಾಟೀಲ್ ಸೇರಿದಂತೆ ಹಲವರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next