Advertisement

ಅಂಗಡಿ, ಹೊಟೇಲ್‌ಗ‌ಳಲ್ಲಿ ನಿಯಮ ಉಲ್ಲಂಘಿಸಿದರೆ ಕ್ರಮ

10:34 PM Oct 16, 2020 | mahesh |

ಉಡುಪಿ: ಇತ್ತೀಚಿನ ದಿನಗಳಲ್ಲಿ ಅಂಗಡಿ-ಮುಂಗಟ್ಟು, ಹೊಟೇಲ್‌ಗ‌ಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು, ಮಾಲಕರು ಮತ್ತು ಸಿಬಂದಿ ಸರಿಯಾದ ರೀತಿ ಮಾಸ್ಕ್ ಧರಿಸದೇ ಇರುವುದು ಕಂಡು ಬಂದಿದ್ದು ಅವರಿಗೆ ತಿಳಿಹೇಳಬೇಕು. ನಿಯಮ ಪಾಲಿಸದೇ ಇದ್ದಲ್ಲಿ ತಾತ್ಕಾಲಿಕವಾಗಿ ಅಂಗಡಿ ಪರವಾನಿಗೆಯನ್ನು ರದ್ದುಪಡಿಸಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್‌ ಸೂಚಿಸಿದರು. ಅವರು ಶುಕ್ರವಾರ ಜಿ.ಪಂ. ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್‌ ತಡೆಗಟ್ಟುವಿಕೆ ಮತ್ತು ನಿಯಂತ್ರಣಕ್ಕಾಗಿ ಸಂಬಂಧಿಸಿ ಕೋವಿಡ್‌ ತೀವ್ರ ಪ್ರಚಾರಾಂದೋಲನ ಕಾರ್ಯಕ್ರಮ ಅನುಷ್ಠಾನದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

Advertisement

ಪ್ರಯಾಣಿಕರಿಗೆ ಮಾಸ್ಕ್
ಬಸ್‌ಗಳಲ್ಲಿ ಪ್ರಯಾಣಿಸುವಾಗ ಪ್ರಯಾಣಿಕರು ತಪ್ಪದೇ ಮಾಸ್ಕ್ ಧರಿಸುವಂತೆ ಬಸ್‌ನ ನಿರ್ವಾಹಕರು ಎಚ್ಚರ ವಹಿಸಬೇಕು. ಸಾರ್ವಜನಿಕರು ಓಡಾಡುವ ಬಸ್‌ಗಳನ್ನು ಪ್ರತೀ ದಿನ ಕಡ್ಡಾಯವಾಗಿ ಸ್ಯಾನಿಟೈಸ್‌ ಮಾಡಬೇಕು ಎಂದರು. ಭಕ್ತರು, ಪ್ರವಾಸಿಗರಿಗೆ ಮಾಸ್ಕ್ ಜಿಲ್ಲೆಯ ಪ್ರತಿಯೊಂದು ದೇವಸ್ಥಾನದಲ್ಲಿ ಹಾಗೂ ಪ್ರೇಕ್ಷಣೀಯ ಸ್ಥಳಗಳಿಗೆ ಬರುವ ಪ್ರವಾಸಿಗರು ಮುಖಗವಸು ಧರಿಸಬೇಕು. ಇಲ್ಲದಿದ್ದರೆ ಅವರ ಪ್ರವೇಶಕ್ಕೆ ಅನುಮತಿ ನೀಡಬಾರದು ಎಂದು ಸೂಚಿಸಿದರು.

ದಂಡ ವಿಧಿಸಲು ಕರೆ
ಸರಕಾರವು ನೀಡಿರುವ ಮಾರ್ಗಸೂಚಿ ನಿರ್ಲಕ್ಷಿಸಿ ಜನರು ಓಡಾಡುತ್ತಿದ್ದರೆ ಅಂಥವರ ಮೇಲೆ ದಂಡವನ್ನು ವಿಧಿಸಬೇಕೆಂದು ಸೂಚಿಸಿದರು.

ಮೀನು ಮಾರುಕಟ್ಟೆಯಲ್ಲಿ ಎಚ್ಚರ
ಮಲ್ಪೆ ಹಾಗೂ ಗಂಗೊಳ್ಳಿ ಬಂದರಿನ ಮೀನು ಮಾರುಕಟ್ಟೆ, ಎ.ಪಿ.ಎಂ.ಸಿ. ಮಾರುಕಟ್ಟೆಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಎಚ್ಚರಿಸುವ ಕೆಲಸವಾಗಬೇಕಿದೆ ಎಂದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಜಿ.ಪಂ. ಸಿಇಒ ಡಾ| ನವೀನ್‌ ಭಟ್‌, ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ, ಕುಂದಾಪುರ ಉಪವಿಭಾಗಾಧಿಕಾರಿ ರಾಜು ಹಾಗೂ ಜಿಲ್ಲಾ ಮಟ್ಟದ ಅನುಷ್ಠಾನ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

ಜಾಗೃತಿ ಮೂಡಿಸಿ
ಸರಕಾರಿ ನೌಕರರು ಕೋವಿಡ್‌ ಪ್ರತಿಜ್ಞೆ ಸ್ವೀಕರಿಸಿ ಮಾರ್ಗಸೂಚಿ ತಪ್ಪದೇ ಪಾಲಿಸುವುದರೊಂದಿಗೆ ಜನ ಸಾಮಾನ್ಯರಿಗೆ ಮಾದರಿಯಾಗಿ
ಮಾರ್ಗಸೂಚಿ ಪಾಲಿಸುವ ರೀತಿಯಲ್ಲಿ ಜನಜಾಗೃತಿ ಆಂದೋಲನ ನಡೆಸ ಬೇಕು. ಎಲ್ಲ ಇಲಾಖೆಯ ಕಾರ್ಯಕ್ರಮ ನಡೆಯುವಾಗ ಕೋವಿಡ್‌ ಜಾಗೃತಿ ಮೂಡಿಸುವ ಕೆಲಸವಾಗಬೇಕು, ಅಲ್ಲದೆ ದೈನಂದಿನ ಕೆಲಸ-ಕಾರ್ಯಗಳ ಪತ್ರದಲ್ಲಿಯೂ ಕೊರೊನಾ ಜಾಗೃತಿ ಮೂಡಿಸುವ ಬಗ್ಗೆ ನಮೂದಿಸಬೇಕು ಎಂದು ಜಿಲ್ಲಾಧಿಕಾರಿ ಜಗದೀಶ್‌ ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next