Advertisement

ನೀರಿನ ಸಮರ್ಪಕ ನಿರ್ವಹಣೆಗೆ ಕ್ರಮ

06:20 AM Mar 06, 2019 | |

ಬೆಂಗಳೂರು: ರಾಜ್ಯದಲ್ಲಿ ಬೇಸಿಗೆ ಆರಂಭವಾಗುತ್ತಿದ್ದು, ಚುನಾವಣೆ ವೇಳೆ ನೀರಿನ ಸಮರ್ಪಕ ನಿರ್ವಹಣೆ ಮಾಡಬೇಕಾಗುತ್ತದೆ. ಹಾಗೆಯೇ ಹಳ್ಳಿಗಳಲ್ಲಿ ರೈತರಿಗೆ ಸಮಸ್ಯೆಯಾಗದಂತೆ ನೀರು ಪೂರೈಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದರು.

Advertisement

ವಿಕಾಸಸೌಧದಲ್ಲಿ ಮಂಗಳವಾರ ಇಲಾಖೆಯ ಅಧಿಕಾರಿಗಳ ತುರ್ತು ಸಭೆ ನಡೆಸಿದ ನಂತರ ಮಾತನಾಡಿ, ಹಳ್ಳಿಗಳಲ್ಲಿ ನೀರು ನಿರ್ವಹಣೆಯಲ್ಲಿ ಯಾವುದೇ ಗೊಂದಲ ಆಗದಂತೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇವೆ. ಇಲಾಖೆ ಅಧಿಕಾರಿಗಳು ತಮ್ಮ ಪ್ರದೇಶವಾರು ಕಾರ್ಯದ ನಿತ್ಯದ ಮಾಹಿತಿ ಕೊಡಲು ನಿರ್ದೇಶನ ನೀಡಲಾಗಿದೆ. ಇಲಾಖೆಯಲ್ಲಿ ಮೇಲಿನ ಹಂತದಿಂದ ಕೆಳಗಿನ ಹಂತದವರೆಗೂ ಶಿಸ್ತು ಪಾಲನೆಗೆ ಒತ್ತು ನೀಡಿದ್ದೇವೆ ಎಂದರು.

ಮೇಕೆದಾಟು ಯೋಜನೆ ಸಂಬಂಧ ಕೇಂದ್ರಕ್ಕೆ ಎಲ್ಲ ಮಾಹಿತಿ ನೀಡಿದ್ದೇವೆ. ಅಲ್ಲಿಂದಲೂ ತಂಡ ಬಂದು ಪರಿಶೀಲನೆ ನಡೆಸಿ ಹೋಗಿದ್ದಾರೆ. ಏನೇನು ಮಾಹಿತಿ ಕೊಡಬೇಕೋ ಎಲ್ಲವನ್ನು ಕೊಟ್ಟಿದ್ದೇವೆ. ಮಹದಾಯಿ ವಿಚಾರದಲ್ಲಿ ಕೇಂದ್ರದ ಮೇಲೆ ಒತ್ತಡ ತಂದಿದ್ದೇವೆ. ಕೇಂದ್ರದಿಂದ ಅಧಿಸೂಚನೆ ಬಂದಿಲ್ಲ ಎಂದು ತಿಳಿಸಿದರು.

2018-19ರ ಎಸ್‌ಇಪಿ, ಟಿಎಸ್‌ಪಿ ಯೋಜನೆಯ ವೆಚ್ಚ ವಿಚಾರವಾಗಿ ಶಾಸಕರಿಂದ ಬಾಕಿ ಕೆಲಸಗಳ ಮಾಹಿತಿ ಪಡೆಯಲಾಗುವುದು. ಈ ಯೋಜನೆಯ ಅನುದಾನ ವ್ಯರ್ಥ ಆಗಲು ಬಿಡುವುದಿಲ್ಲ. ಯಾವುದೇ ಕಾಮಗಾರಿ ಮಾಡಿದರೂ ವಿಡಿಯೋ ಕೊಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇವೆ. ಕೃಷ್ಣನ ಲೆಕ್ಕ ರಾಮನ ಲೆಕ್ಕಕ್ಕೆ ಅವಕಾಶ ಇಲ್ಲ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next