Advertisement

ಹೆಚ್ಚಿನ ದರ ವಸೂಲಿ ಮಾಡಿದರೆ ಕ್ರಮ

04:55 PM Apr 19, 2021 | Team Udayavani |

ಯಾದಗಿರಿ : ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿ ಅನಿರ್ದಿಷ್ಟಾವಧಿವ ರೆಗೆ ಮುಷ್ಕರ ಹಮ್ಮಿಕೊಂಡ ಹಿನ್ನೆಲೆ ಪ್ರಯಾಣಿಕರಿಗೆ ಉಂಟಾಗುವ ತೊಂದರೆ ತಪ್ಪಿಸಲು ಸಾರ್ವಜನಿಕರಿಗೆ ಸುಗಮ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಪ್ರಯಾಣಿಕರಿಂದ ಖಾಸಗಿ ವಾಹನಗಳು ಹೆಚ್ಚಿನ ದರ ವಸೂಲಿ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಪ್ರಾದೇಶಿಕ ಸಾರಿಗೆ ಅಧಿಕಾರಿ ಕೆ. ದಾಮೋದರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement

ಮ್ಯಾಕ್ಸಿ ಕ್ಯಾಬ್‌, ಕಾಂಟ್ರ್ಯಾಕ್ಟ್ ಕ್ಯಾರೇಜ್‌ ಬಸ್‌, ಶಾಲಾ ಬಸ್‌ ಮತ್ತು ಪಿಎಸ್‌ವಿ ಬಸ್‌ಗಳು ಪ್ರಯಾಣಿಕರಿಂದ ನಿಗದಿತ ಪ್ರಯಾಣ ದರಕ್ಕಿಂತ ಹೆಚ್ಚಿನ ದರ ವಸೂಲಿ ಮಾಡುತ್ತಿದ್ದಾರೆಂದು ಸಾರ್ವಜನಿಕರು ದೂರುತ್ತಿದ್ದಾರೆ.

ಯಾವುದಾದರೂ ಪ್ರಯಾಣಿಕ ವಾಹನವು ನಿಗದಿತ ಪ್ರಯಾಣ ದರಕ್ಕಿಂತ ಹೆಚ್ಚಿನ ಪ್ರಯಾಣ ದರ ವಸೂಲಿ ಮಾಡಿದ್ದನ್ನು ವಾಹನ ಸಂಖ್ಯೆಯ ಸಮೇತ ಪ್ರಾದೇಶಿಕ ಸಾರಿಗೆ ಅಧಿ  ಕಾರಿ ಕಚೇರಿಗೆ ದೂರು ನೀಡಿದ್ದಲ್ಲಿ ವಾಹನ ಮಾಲೀಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಆದ್ದರಿಂದ ಯಾವುದೇ ಕಾರಣಕ್ಕೂ ದುಪ್ಪಟ್ಟು ದರ ವಸೂಲಿ ಮಾಡದಂತೆ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next