Advertisement

ಪ್ಲಾಸ್ಟಿಕ್ ಬಳಸಿ ಇಡ್ಲಿ ಬೇಯಿಸಿದರೆ ಕ್ರಮ

03:42 PM Sep 29, 2019 | Team Udayavani |

ಹುಳಿಯಾರು: ತಾಲೂಕಿನಲ್ಲಿ 40 ಮೈಕ್ರಾ ನ್‌ ಗಿಂತ ಕಡಿಮೆ ದಪ್ಪ ಇರುವ ಪ್ಲಾಸ್ಟಿಕ್‌ ಉತ್ಪನ್ನಗಳ ಬಳಕೆ ನಿಷೇಧಿಸಲಾಗಿದ್ದರೂ, ಹೋಟೆಲ್‌ಗ‌ಳಲ್ಲಿ ಪ್ಲಾಸ್ಟಿಕ್‌ ಪೇಪರ್‌ ಬಳಸಿ ಇಡ್ಲಿ ಬೇಯಿಸುತ್ತಿರುವ ಬಗ್ಗೆ ದೂರುಗಳು ಕೇಳಿ ಬರುತ್ತಿದೆ. ಹೋಟೆಲ್‌ನವರು ತಕ್ಷಣ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ ಕಾಟನ್‌ ಬಟ್ಟೆ ಬಳಸಬೇಕು. ಇಲ್ಲವಾದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ತಹಶೀಲ್ದಾರ್‌ ತೇಜಸ್ವಿನಿ ಎಚ್ಚರಿಸಿದ್ದಾರೆ.

Advertisement

ಹುಳಿಯಾರಿನಲ್ಲಿ ತಾಲೂಕಿನ ಎಲ್ಲಾ ಇಲಾಖೆಯ ಅಧಿಕಾರಿಗಳೊಂದಿಗೆ ಪ್ಲಾಸ್ಟಿಕ್‌ ನಿಷೇಧ ಕುರಿತು ಜನಜಾಗೃತಿ ಮೂಡಿಸಿ ಅವರು ಮಾತನಾಡಿದರು. ಮನೆಗಳಲ್ಲಿ ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಲು ಪಣತೊಡಬೇಕಾಗಿದೆ. ಅಡುಗೆ ಮನೆಯ ಸಾಮಗ್ರಿಗಳು ಪ್ಲಾಸ್ಟಿಕ್‌ ಮಯವಾಗುವುದನ್ನು ನಿಲ್ಲಿಸಬೇಕು. ಮಾರುಕಟ್ಟೆಗೆ ತೆರಳಿ  ದಾಗ ಪ್ಲಾಸ್ಟಿಕ್‌ ಕವರ್‌ ನೆಚ್ಚಿಕೊಂಡಿರ  ಬಾರದು. ಪ್ಲಾಸ್ಟಿಕ್‌ ಬದಲಾಗಿ ಪರಿಸರ ಸ್ನೇಹಿ ಬ್ಯಾಗ್‌ ಅನುಸರಿಸಿದರೆ ಪರಿಸರ ಸಂರಕ್ಷಣೆ ಹಾಗೂ ಉತ್ತಮ ಆರೋಗ್ಯ ಕಾಪಾಡಿ ಕೊಳ್ಳಬಹುದು ಎಂದು ಹೇಳಿದರು. ತಾಲೂಕು ಪಂಚಾಯಿತಿ ಇಒ ನಾರಾಯಣಮೂರ್ತಿ ಮಾತನಾಡಿ, ಪ್ಲಾಸ್ಟಿಕ್‌ ಬಳಕೆಯಿಂದ ಮಣ್ಣು, ನೀರು, ಸುತ್ತಮುತ್ತಲಿನ ಜೀವ ಸಂಕುಲ ಮತ್ತು ಮಾನವನ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದರು.

ಪ್ಲಾಸ್ಟಿಕ್‌ನಲ್ಲಿರುವ ಹಾನಿಕಾರಕ ಅಂಶಗಳು ಮನುಷ್ಯನ ದೇಹಕ್ಕೆ ನಾನಾ ಹಂತಗಳಲ್ಲಿ ಸೇರಿ ಮಾರಕ ರೋಗಗಳಿಗೆ ಕಾರಣ ವಾಗುತ್ತವೆ. ಥೈರಾಯ್ಡ, ಆಸ್ತಮಾ, ಹೃದಯ ಕಾಯಿಲೆ, ಕೂದಲು ಮತ್ತು ಚರ್ಮದ ಸಮಸ್ಯೆ, ನರಸಂಬಂಧಿ ಕಾಯಿಲೆಗಳು ಬರುವ ಸಾಧ್ಯತೆ ಹೆಚ್ಚು ಎಂದು ಎಚ್ಚರಿಸಿದರು.

ಉಪತಹಶೀಲ್ದಾರ್‌ ಮಲ್ಲಿಕಾರ್ಜುನಯ್ಯ, ಕಂದಾಯ ತನಿಖಾಧಿಕಾರಿ ಮಂಜುನಾಥ್‌, ಸಹಾಯಕ ಕೃಷಿ ನಿರ್ದೇಶಕ ಡಿ.ಆರ್‌.ಹನುಮಂತರಾಜು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರಾದ ರೇಣುಕಾದೇವಿ, ಬೆಸ್ಕಾಂ ಎಇಇ ಗವೀರಂಗಯ್ಯ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಮಂಜುನಾಥ್‌ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next