Advertisement

Medical,Nursing ಕಾಲೇಜು ಹೆಚ್ಚು ಶುಲ್ಕ ಪಡೆದರೆ ಕ್ರಮ: ಡಾ|ಶರಣ ಪ್ರಕಾಶ

07:25 PM Sep 17, 2024 | Team Udayavani |

ರಾಯಚೂರು: ರಾಜ್ಯದಲ್ಲಿ ವೈದ್ಯಕೀಯ, ನರ್ಸಿಂಗ್‌ ಕಾಲೇಜುಗಳು ಸರ್ಕಾರ ನಿಗದಿಪಡಿಸಿದ್ದಕ್ಕಿಂತ ಹೆಚ್ಚಿನ ಶುಲ್ಕ ಪಡೆಯುವಂತಿಲ್ಲ. ಹಾಗೇನಾದರೂ ಪಡೆದಿದ್ದು ಕಂಡು ಬಂದರೆ ಆ ಸಂಸ್ಥೆಗಳ ಪರವಾನಗಿ ರದ್ದು ಮಾಡಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಎರಡು ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಕೋಟಾದಡಿ ಸೀಟು ಪಡೆದವರಿಗೆ ಹೆಚ್ಚಿನ ಶುಲ್ಕ ಪಡೆಯುವಂತಿಲ್ಲ. ಮುನಿರತ್ನ ಮೇಲೆ ಪ್ರಕರಣ ಆದ ಮೇಲೆ ಅವರನ್ನು ಬಂಧಿಸಲಾಗಿದೆ. ಆದರೆ, ಕಾಂಗ್ರೆಸ್‌ ಶಾಸಕ ಚನ್ನಾರಡ್ಡಿ ವಿರುದ್ಧ ಸೂಕ್ತ ಸಾಕ್ಷಿಗಳಿದ್ದರೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಈಗೇನಾದರೂ ನಾನು ಹೇಳಿದರೆ ಅದು ಅವರ ತನಿಖೆಗೆ ವ್ಯತಿರಿಕ್ತವಾಗುತ್ತದೆ ಎಂದರು.

ನಾಗಮಂಗಲ ಘಟನೆ ಎನ್‌ಐಗೆ ವಹಿಸಲ್ಲ: ಡಾ|ಶರಣಪ್ರಕಾಶ
ರಾಯಚೂರು:ನಾಗಮಂಗಲ ಘಟನೆ ಎನ್‌ಐಗೆ ವಹಿಸುವ ಅಗತ್ಯವೇ ಇಲ್ಲ. ಪೊಲೀಸರು ತನಿಖೆ ನಡೆಸುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ| ಶರಣಪ್ರಕಾಶ ಪಾಟೀಲ್‌ ತಿಳಿಸಿದರು.

ಸುದ್ದಿಗಾರರ ಜತೆ ಮಾತನಾಡಿದ ಅವರು, ನಾಗಮಂಗಲ ಘಟನೆಯಲ್ಲಿ ಪೆಟ್ರೋಲ್‌ ಬಾಂಬ್‌ ಬಳಸಿದ್ದಕ್ಕೆ, ಪ್ಯಾಲೆಸ್ತೇನ್‌ ಧ್ವಜ ಪ್ರದರ್ಶಿಸಿದ್ದಕ್ಕೆ ಗುಪ್ತಚರ ಇಲಾಖೆ ವಿಫಲವಾಗಿದೆ ಎನ್ನಲಾಗದು. ಘಟನೆ ಹಿಂದಿರುವವರನ್ನು ಬಂಧಿಸಲಾಗಿದೆ.

ಕಾನೂನು ಕಾಪಾಡುವಲ್ಲಿ ಬಿಗಿ ಕ್ರಮ ಕೈಗೊಳ್ಳಲಾಗಿದೆ. ಈ ಘಟನೆಯಲ್ಲಿ ಕೇರಳದವರು ಮತ್ತು ಬಾಂಗ್ಲಾ ವಲಸಿಗರು ಇದ್ದಾರೆ ಎಂದು ಬಿಜೆಪಿಯವರು ಮಾಡುತ್ತಿರುವ ಆರೋಪಗಳು ಪೊಲೀಸ್‌ ತನಿಖೆಯಿಂದ ತಿಳಿಯಲಿದೆ ಎಂದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next