Advertisement

ಮಾಸ್ಕ್ ಧರಿಸದಿದ್ದರೆ ಕ್ರಮ; ದಂಡ ಪ್ರಯೋಗಕ್ಕೆ ರಾಜ್ಯ ಸರಕಾರದ ಸಿದ್ಧತೆ

01:32 AM Sep 30, 2020 | mahesh |

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ರಾಜ್ಯ ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಇನ್ನು ಮುಂದೆ ಮಾಸ್ಕ್ ಧರಿಸದವರು, ಸಾಮಾಜಿಕ ಅಂತರ ಪಾಲಿಸದವರ ವಿರುದ್ಧ ದಂಡ ಪ್ರಯೋಗ, ಕಠಿನ ಕಾನೂನು ಕ್ರಮ ತೆಗೆದು ಕೊಳ್ಳಲು ನಿರ್ಧರಿಸಿದೆ.
ಮಂಗಳವಾರ 10,453 ಮಂದಿಗೆ ಕೊರೊನಾ ತಗಲಿದೆ. 136 ಮಂದಿ ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

Advertisement

ದಾಖಲೆಯ ಏರಿಕೆ
ವೈದ್ಯಕೀಯ ಸಚಿವ ಡಾ| ಕೆ. ಸುಧಾಕರ್‌ ಮಂಗಳವಾರ ವಿಧಾನಸೌಧದಲ್ಲಿ ತಜ್ಞರು ಮತ್ತು ಅಧಿಕಾರಿಗಳ ಜತೆ ಚರ್ಚೆ ನಡೆಸಿದರು. ಜುಲೈ, ಆಗಸ್ಟ್‌ ಮತ್ತು ಸೆಪ್ಟಂಬರ್‌ನಲ್ಲಿ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಸೋಂಕಿನ ಕುರಿತು ರಾಜ್ಯ ಸರಕಾರವು ಎಷ್ಟೇ ಜಾಗೃತಿ ಮೂಡಿಸಿದರೂ ಸಾರ್ವಜನಿಕರು ಸೂಚನೆಗಳನ್ನು ಪಾಲಿಸದೆ ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಕೂಡಲೇ ಕಠಿನ ಕಾನೂನು ಜಾರಿಗೆ ತರುವುದೇ ಸರಕಾರದ ಮುಂದಿರುವ ಏಕೈಕ ಮಾರ್ಗ. ಮಾರ್ಗಸೂಚಿ ಅನುಸರಿಸದವರಿಗೆ ಕಠಿನ ಶಿಕ್ಷೆ ಮತ್ತು ದಂಡ ಪ್ರಯೋಗ ಅನಿವಾರ್ಯ ಎಂದರು.

ಎರಡು ದಿನಗಳಲ್ಲಿ ಅಧಿಕೃತ ಆದೇಶ
ಮಾಸ್ಕ್ ಧರಿಸದ, ಸಾಮಾಜಿಕ ಅಂತರ ಕಾಯ್ದುಕೊಳ್ಳದ, ಸಭೆ – ಸಮಾರಂಭ ನೆಪದಲ್ಲಿ ಜನದಟ್ಟಣೆಗೆ ಅವಕಾಶ ಮಾಡಿಕೊಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವ ಮತ್ತು ಅಂತ್ಯಸಂಸ್ಕಾರದಲ್ಲಿ ಮೃತರ ಕುಟುಂಬ ಸದಸ್ಯರು ಪಿಪಿಇ ಕಿಟ್‌ ಧರಿಸಿ ಪಾಲ್ಗೊಳ್ಳಲು ಅನುಮತಿ ನೀಡುವ ಬಗ್ಗೆ ಮುಖ್ಯಮಂತ್ರಿಯವರ ಜತೆ ಚರ್ಚಿಸಿ ಒಂದೆರಡು ದಿನಗಳಲ್ಲಿ ಅಧಿಕೃತ ಆದೇಶ ಹೊರಡಿಸಲಾಗುತ್ತದೆ ಎಂದು ಡಾ| ಸುಧಾಕರ್‌ ತಿಳಿಸಿದ್ದಾರೆ.

ವೆಂಕಯ್ಯ ನಾಯ್ಡುಗೆ ಕೊರೊನಾ
ದೇಶಾದ್ಯಂತ ಕೊರೊನಾ ಭೀತಿ ಹೆಚ್ಚಾಗುತ್ತಲೇ ಇದ್ದು, ಉಪರಾಷ್ಟ್ರಪತಿ ವೆಂಕಯ್ಯನಾಯ್ಡು ಅವರಿಗೂ ಸೋಂಕು ತಗಲಿದೆ. ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, ಮಂಗಳವಾರ ಬೆಳಗ್ಗೆ ಪರೀಕ್ಷೆ ಮಾಡಿಸಲಾಗಿದ್ದು, ಪಾಸಿಟಿವ್‌ ಬಂದಿದೆ. ಸದ್ಯ ಲಕ್ಷಣಗಳಿಲ್ಲ, ಆರೋಗ್ಯವಾಗಿದ್ದೇನೆ ಎಂದಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next