Advertisement

ಹೋಟೆಲ್‌ನಲ್ಲಿ ಅಸ್ಪೃಶ್ಯತೆ ಆಚರಿಸಿದರೆ ಕ್ರಮ

12:26 PM Oct 30, 2021 | Team Udayavani |

ಯಾದಗಿರಿ: ಜಿಲ್ಲೆಯಲ್ಲಿ ಅಸ್ಪೃಶ್ಯತೆ ಆಚರಿಸುವ ಹೋಟೆಲ್‌ಗ‌ಳು ಕಂಡು ಬಂದರೆ ಅಂತಹ ಹೋಟೆಲ್‌ ಗಳ ವಿರುದ್ಧ ಎಫ್‌.ಐ.ಆರ್‌ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌ ಸೂಚಿಸಿದರು.

Advertisement

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲೆಯ ಅನುಸೂಚಿತ ಜಾತಿ, ಪಂಗಡಗಳ ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿಯ ಸಭೆಯಲ್ಲಿ ಅವರು ಮಾತನಾಡಿದರು.

ದಲಿತರ ಮೇಲಿನ ದೌರ್ಜನ್ಯ ನಿಯಂತ್ರಿಸಲು ಸರಕಾರದಿಂದ ಜಾಗೃತಿ ಮೂಡಿಸಲು ಕ್ರಮ ಕೈಗೊಂಡು ದೌರ್ಜನ್ಯ ತಡೆಯುವಂತೆ ದೌರ್ಜನ್ಯ ನಿಯಂತ್ರಣ ಸಮಿತಿಯ ಸದಸ್ಯರು ಜಿಲ್ಲಾಧಿಕಾರಿಗಳಿಗೆ ಕೋರಿದರು. ಇದಕ್ಕೆ ಸ್ಪಂದಿಸಿದ ಜಿಲ್ಲಾಧಿಕಾರಿ, ಜಿಲ್ಲಾಡಳಿತ ಪೊಲೀಸ್‌ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಇತರೆ ಇಲಾಖೆಗಳ ಮೂಲಕ ಗ್ರಾಮಗಳಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿಯ ಸದಸ್ಯ ನಾಗಣ್ಣ ಬಡಿಗೇರಾ ಮಾತನಾಡಿ, ಜಿಲ್ಲೆಯ ಹಲವು ಗ್ರಾಮಗಳಲ್ಲಿ ದಲಿತರಿಗೆ ಹೋಟೆಲ್‌ ಪ್ರವೇಶವಿಲ್ಲ. ಪ್ರತ್ಯೇಕ ಲೋಟ ಮತ್ತು ಜಾಗ ಇಂದಿಗೂ ಇದೆ. ದಲಿತರು ಮೃತಪಟ್ಟರೆ ಅವರ ಅಂತ್ಯ ಸಂಸ್ಕಾರಕ್ಕೆ ಬರುವವರು ತಮ್ಮ ಹೋಟೆಲ್‌ಗೆ ಬರುವ ಸಾಧ್ಯತೆ ಇದೆ ಎಂಬ ಕಾರಣಕ್ಕೆ ಹೋಟೆಲ್‌ ಗಳನ್ನು ಬಂದ್‌ ಮಾಡುವುದು ಕೆಲ ಗ್ರಾಮಗಳಲ್ಲಿ ರೂಢಿಯಿದೆ. ಊರಿಗೆ ನೆಂಟರು ಬಂದಾಗ ಹೋಟೆಲ್‌ಗೆ ಹೋಗಬೇಕಾಗುತ್ತದೆ. ಅಲ್ಲಿ ನಮಗೆ ಪ್ರತ್ಯೇಕ ವ್ಯವಸ್ಥೆ ಇರುವುದು ಮುಜುಗರ ಉಂಟು ಮಾಡುತ್ತದೆ ಎಂದು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರು.

ಇದಕ್ಕೆ ಸ್ಪಂದಿಸಿದ ಅವರು, ಅಸ್ಪೃಶ್ಯತೆ ಆಚರಿಸುವ ಹೋಟೆಲ್‌ಗ‌ಳು ಕಂಡು ಬಂದರೆ ಅಂತಹ ಹೋಟೆಲ್‌ಗ‌ಳ ವಿರುದ್ಧ ಎಫ್‌.ಐ.ಆರ್‌ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲು ಪೊಲೀಸ್‌ ವರಿಷ್ಠಾಧಿಕಾರಿಗಳಿಗೆ ಸೂಚಿಸಿದರು.

Advertisement

ಇದನ್ನೂ ಓದಿ: ವ್ಯಾಪಾರ ವಹಿವಾಟು ಸ್ಥಗಿತ, ಪುನೀತ್‌ಗೆ ನಮನ

ನಾಗರಾಜ ದೊಡ್ಮನಿ ಸದಸ್ಯ ಮಾತನಾಡಿದರು. ಈ ಸಂದರ್ಭದಲ್ಲಿ ಜಿಪಂ ಸಿಇಒ ಶಿಲ್ಪಾ ಶರ್ಮಾ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಚೆನ್ನಬಸವ ಎಸ್‌, ಡಿವೈಎಸ್ಪಿ ಸಂತೋಷ ಬನಹಟ್ಟಿ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ ಪ್ರಭಾಕರ್‌ ಕವಿತಾಳ, ಡಿಡಿಪಿಐ ಶಾಂತಗೌಡ ಪಾಟೀಲ್‌, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಘವೇಂದ್ರ, ದೌರ್ಜನ್ಯ ಸಮಿತಿಯ ಸದಸ್ಯೆ ರಮಾದೇವಿ ಕಾವಲಿ ಕಿಲ್ಲನಕೇರಾ ಇದ್ದರು.

ದಲಿತರ ಮೇಲೆ ನಿರಂತರ ದೌರ್ಜನ್ಯ ಪ್ರಕರಣಗಳು ನಡೆದರು ತಪ್ಪಿತಸ್ಥರನ್ನು ಬಂಧಿಸದೇ ಕೌಂಟರ್‌ ಕೇಸ್‌ಗಳನ್ನು ಹಾಕಲಾಗುತ್ತಿದೆ. ಇದರಿಂದ ಪರಿಶಿಷ್ಟ ವರ್ಗದ ಜನಾಂಗದವರ ಮೇಲೆ ಮತ್ತಷ್ಟು ದೌರ್ಜನ್ಯ ನಡೆಯುವಂತಾಗುತ್ತಿದ್ದು, ಜಿಲ್ಲಾಡಳಿತ ಮತ್ತು ಪೊಲೀಸ್‌ ಇಲಾಖೆ ಗಂಭೀರವಾಗಿ ಪರಿಗಣಿಸಿ ಇದನ್ನು ನಿಯಂತ್ರಿಸಬೇಕು. -ಖಂಡಪ್ಪ ದಾಸನ್‌, ದೌರ್ಜನ್ಯ ನಿಯಂತ್ರಣ ಜಾಗೃತಿ ಸಮಿತಿ ಸದಸ್ಯ ಯಾದಗಿರಿ

ಜಿಲ್ಲೆಯಲ್ಲಿ ಯಾವುದೇ ದೌರ್ಜನ್ಯ ಪ್ರಕರಣಗಳು ನಡೆದರೆ ಅದನ್ನು ಅರಕ್ಷಕ ಉಪ ಅಕ್ಷರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು. ಯಾವುದೇ ಕಾರಣಕ್ಕೂ ತಪ್ಪಿತಸ್ಥರನ್ನು ರಕ್ಷಣೆ ಮಾಡಲಾಗುವುದಿಲ್ಲ. ಕೌಂಟರ್‌ ಕೇಸ್‌ಗಳನ್ನು ತನಿಖೆ ಮಾಡಿ ಸುಳ್ಳೆಂದು ಕಂಡು ಬಂದರೆ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಲಾಗುವುದು. -ಡಾ| ಸಿ.ಬಿ. ವೇದಮೂರ್ತಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ

Advertisement

Udayavani is now on Telegram. Click here to join our channel and stay updated with the latest news.

Next