Advertisement

ಖಾಸಗಿ ಕ್ಲಿನಿಕ್‌ ತೆರೆಯದಿದ್ದರೆ ಕ್ರಮ: ಸುಧಾಕರ್‌

11:01 PM Apr 11, 2020 | Sriram |

ಚಿಕ್ಕಬಳ್ಳಾಪುರ: ಕೋವಿಡ್ 19 ಸೋಂಕು ವ್ಯಾಪಕವಾಗಿ ಹರಡುತ್ತಿರುವ ಈ ಸನ್ನಿವೇಶದಲ್ಲಿ ರಾಜ್ಯದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ತುರ್ತು ಪರಿಸ್ಥಿತಿ ಉಂಟಾಗಿರುವ ಸಂದರ್ಭ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನ್ಲಿಕ್‌ ಕಾರ್ಯನಿರ್ವಹಿಸಿ ಜನರ ಸೇವೆಗೆ ಮುಂದಾಗದೇ ಹೋದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ. ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

Advertisement

ಕೋವಿಡ್ 19 ಸಂಕಷ್ಟದಿಂದ ಜನ ಭಯಭೀತರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ವೈದ್ಯರೇ ಕಿನ್ಲಿಕ್‌ಗಳಿಗೆ ಬಾಗಿಲು ಹಾಕಿಕೊಂಡು ಮನೆಯಲ್ಲಿ ಇದ್ದರೆ ಹೇಗೆ? ಕೂಡಲೇ ಆರೋಗ್ಯ ಅಧಿಕಾರಿಗಳು ಖಾಸಗಿ ವೈದ್ಯರ ಸಭೆ ಕರೆದು ಚರ್ಚೆ ನಡೆಸಿ ಖಾಸಗಿ ಆಸ್ಪತ್ರೆಗಳು ಕಾರ್ಯನಿರ್ವಹಿಸಬೇಕು. ಇಲ್ಲದಿದ್ದರೆ ಸರಕಾರ ಕಠಿನ ಕ್ರಮಕ್ಕೆ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next