Advertisement

ರಸ್ತೆ ಬದಿ ಶಾಲಾ ವಾಹನ ನಿಲ್ಲಿಸದರೆ ಕ್ರಮ

01:05 AM May 19, 2019 | Team Udayavani |

ಬೆಂಗಳೂರು: ಖಾಸಗಿ ಶಾಲೆಗಳ ಮುಂಭಾಗದ ರಸ್ತೆಯಲ್ಲಿ ಅಕ್ರಮವಾಗಿ ಶಾಲಾ ವಾಹನಗಳನ್ನು ನಿಲ್ಲಿಸುವ ಶಾಲಾ ಆಡಳಿತ ಮಂಡಳಿ ವಿರುದ್ಧ ಕಾನೂನು ಕ್ರಮಕೈಗೊಳ್ಳಲಾಗುವುದು ಎಂದು ಸಂಚಾರ ವಿಭಾಗದ ಹೆಚ್ಚುವರಿ ಪೊಲೀಸ್‌ ಆಯುಕ್ತ ಪಿ.ಹರಿಶೇಖರನ್‌ ಎಚ್ಚರಿಕೆ ನೀಡಿದ್ದಾರೆ.

Advertisement

ನಗರದ ಖಾಸಗಿ ಶಾಲೆ ಆವರಣದಲ್ಲಿರುವ ಪಾರ್ಕಿಂಗ್‌ ವ್ಯವಸ್ಥೆ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತದೆ. ಒಂದು ವೇಳೆ ಪಾರ್ಕಿಂಗ್‌ ವ್ಯವಸ್ಥೆ ಇಲ್ಲದ ಶಾಲಾ ಆಡಳಿತ ಮಂಡಳಿಗೆ ತಕ್ಷಣವೇ ಪರ್ಯಾಯ ವ್ಯವಸ್ಥೆ ಕಲ್ಪಿಸಿಕೊಳ್ಳುವಂತೆ ಸೂಚಿಸಲಾಗುತ್ತದೆ.

ಇಲ್ಲವಾದರೆ, ಅಗತ್ಯವಿರುವ ಕಡೆ ಸಂಚಾರ ಪೊಲೀಸ್‌ ವಿಭಾಗದಿಂದಲೇ ಜಾಗ ಸೂಚಿಸಲಾಗುವುದು. ಜತೆಗೆ ಪಾರ್ಕಿಂಗ್‌ ವ್ಯವಸ್ಥೆ ಇದ್ದು ರಸ್ತೆ ಬದಿಯಲ್ಲಿ ನಿಲ್ಲಿಸಿ ವಾಹನ ಸಂಚಾರಕ್ಕೆ ಅಡ್ಡಿ ಪಡಿಸುವ ಶಾಲಾ ಆಡಳಿತ ಮಂಡಳಿ ಮತ್ತು ವಾಹನ ಚಾಲಕನ ವಿರುದ್ಧ ಕಾನೂನು ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ಹೇಳಿದರು.

ಸಿಬ್ಬಂದಿ ಬಗ್ಗೆ ಪರಿಶೀಲನೆ: ಶಾಲೆ ಆರಂಭದ ಬಳಿಕ ಯಾವ ರಸ್ತೆಯಲ್ಲಿ ಎಷ್ಟು ಶಾಲಾ ವಾಹನಗಳು ನಿಲ್ಲುತ್ತವೆ? ಶಾಲಾ ವಲಯಗಳಲ್ಲಿ ಎಷ್ಟು ಸಂಚಾರ ಸಿಬ್ಬಂದಿ ಕಾರ್ಯನಿರ್ವಹಿಸುತ್ತಾರೆ? ನಿಲುಗಡೆ ನಿಷೇಧಿತ ಪ್ರದೇಶದಲ್ಲಿ ಎಷ್ಟು ವಾಹನಗಳು ನಿಲ್ಲುತ್ತವೆ ಎಂಬಿತ್ಯಾದಿ ಮಾಹಿತಿಯನ್ನು ಸದ್ಯದಲ್ಲೇ ಸಂಗ್ರಹಿಸಿ, ಮುಂದಿನ ಕ್ರಮಕೈಗೊಳ್ಳುತ್ತವೆ. ಅಲ್ಲದೆ, ಪಾರ್ಕಿಂಗ್‌ ವ್ಯವಸ್ಥೆ ಕುರಿತು ಶಾಲಾ ಆಡಳಿತ ಮಂಡಳಿ ಸದಸ್ಯರು, ಚಾಲಕರ ಜತೆ ಸಭೆ ಕೂಡ ನಡೆಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next