Advertisement

ಸುಪ್ರೀಂ ಆದೇಶದಂತೆ ಕ್ರಮ

01:58 PM Dec 13, 2018 | Team Udayavani |

ವಿಧಾನಸಭೆ: ಶಿವರಾಮ ಕಾರಂತ ಬಡಾವಣೆಗೆ ಭೂಸ್ವಾಧೀನ ಮಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ಆದೇಶ ನೀಡಿರುವುದರಿಂದ ಈಗಾಗಲೆ ಬಿಡಿಎಯಿಂದ ಎನ್‌ಒಸಿ ಪಡೆದು ಮನೆ ನಿರ್ಮಿಸಿಕೊಂಡವರಿಗೆ ಪರಿಹಾರ ನೀಡುವ ವಿಚಾರದಲ್ಲಿ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌ ಹೇಳಿದ್ದಾರೆ.

Advertisement

ವಿಧಾನಸಭೆಯಲ್ಲಿ ಶೂನ್ಯವೇಳೆಯಲ್ಲಿ ಯಲಹಂಕ ಶಾಸಕ ವಿಶ್ವನಾಥ್‌ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಶಿವರಾಮ ಕಾರಂತ ಬಡಾವಣೆ ನಿರ್ಮಾಣ ಕೈ ಬಿಟ್ಟಿದ್ದರಿಂದ ಕೆಲವರು ಖಾಸಗಿಯವರು ಮನೆ ಕಟ್ಟಿಕೊಂಡಿದ್ದಾರೆ. ಅವರಿಗೆ ಸುಪ್ರೀಂಕೋರ್ಟ್‌ ತೀರ್ಪಿನ ಹಿನ್ನೆಲೆಯಲ್ಲಿ ಭೂಸ್ವಾಧೀನ ಮಾಡಿಕೊಳ್ಳುವ ಸಂದರ್ಭದಲ್ಲಿ ಪರಿಶೀಲನೆ ನಡೆಸಿ ಪರಿಹಾರ ನೀಡಲಾಗುವುದು ಎಂದು ಹೇಳಿದರು.

ಬಡಾವಣೆಯಲ್ಲಿ ಈಗಾಗಲೇ ಕೆಲವರು ಅಕ್ರಮವಾಗಿ ಮನೆ ನಿರ್ಮಿಸಿಕೊಂಡಿದ್ದಾರೆ ಎಂದು ಎಸ್‌.ಆರ್‌. ವಿಶ್ವನಾಥ್‌ ಸರ್ಕಾರದ ಗಮನಸೆಳೆದು, 3566 ಎಕರೆ ಪ್ರದೇಶವನ್ನು ಸಂಪೂರ್ಣ ಭೂಸ್ವಾಧೀನ ಮಾಡಿಕೊಳ್ಳುವಂತೆ ಸುಪ್ರಿಂಕೋರ್ಟ್‌ ಆ ದೇಶಿಸಿದೆ. ಆದರೆ ಈಗಾಗಲೇ ಬಿಡಿಎಯಿಂದ ಎನ್‌ಒಸಿ ಪಡೆದು ಮನೆ ನಿರ್ಮಿಸಿಕೊಂಡಿರುವವರಿಗೆ ವಿನಾಯ್ತಿ ನೀಡುವ ಬಗ್ಗೆ ಪರಿಶೀಲಿಸುವ ಬಗ್ಗೆ ಸರ್ಕಾರ ಯಾವ ನಿರ್ಧಾರ ತೆಗೆದುಕೊಂಡಿದೆ ಎಂದು ವಿಶ್ವನಾಥ್‌ ಪ್ರಶ್ನಿಸಿದರು.

ಯೋಜನೆ ಅನುಷ್ಠಾನದಲ್ಲಿ ಸಂದರ್ಭದಲ್ಲಿ ಎನ್‌ಒಸಿ ಪಡೆದವರನ್ನು ಗಮನದಲ್ಲಿಟ್ಟುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಪರಮೇಶ್ವರ್‌ ಹೇಳಿದರು. 

Advertisement

Udayavani is now on Telegram. Click here to join our channel and stay updated with the latest news.

Next