ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಎದುರಿಸುವ ಕಾರ್ಯತಂತ್ರಗಳ ಕುರಿತು ರಾಹುಲ್ ಗಾಂಧಿ ಅವರಿಗೆ ಕ್ರಿಯಾ ಯೋಜನೆ ಸಲ್ಲಿಸಿದ್ದೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
Advertisement
ದಿಲ್ಲಿಯಲ್ಲಿ ಮಾತನಾಡಿದ ಅವರು, ನಾನು ಹಾಗೂ ಸಿದ್ದರಾಮಯ್ಯ ಅವರು ರಾಹುಲ್ ಗಾಂಧಿ ಜತೆ ಸುದೀರ್ಘ ಚರ್ಚೆ ನಡೆಸಿದ್ದೇವೆ. ನಮ್ಮ ಮುಂದಿನ ಕಾರ್ಯತಂತ್ರಗಳ ರೂಪುರೇಷೆಗಳ ಕ್ರಿಯಾ ಯೋಜನೆ ನೀಡಿದ್ದೇವೆ.
ಪ್ರತಿಯೊಬ್ಬ ನಾಯಕನಿಗೂ ಒಂದೊಂದು ರೀತಿಯ ಬಲ ಇದ್ದು, ಒಟ್ಟಾಗಿ ಚುನಾವಣೆ ಎದುರಿಸುತ್ತೇವೆ. ಮುಂದಿನ ಬಾರಿ ನಾವು ಸ್ವಂತ ಬಲದ ಮೇಲೆ ಸರಕಾರ ರಚಿಸುವುದು ಖಚಿತ ಎಂದು ಹೇಳಿದರು.