ದಾವಣಗೆರೆ: ಗ್ರಾಮ ಪಂಚಾಯಿತಿ ಚುನಾವಣೆಯನ್ನು ಜಿಲ್ಲೆಯಲ್ಲಿ ವ್ಯವಸ್ಥಿತಹಾಗೂ ಶಾಂತಿಯುತವಾಗಿ ನಡೆಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಮಹಾಂತೇಶ ಜಿ. ಬೀಳಗಿ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಒಟ್ಟು 191 ಗಾಪಂಗಳ 2,628 ಕ್ಷೇತ್ರಗಳಿಗೆ 2 ಹಂತದಲ್ಲಿ ಡಿ.22 ಮತ್ತು 27 ರಂದು ಚುನಾವಣೆ ನಡೆಯಲಿದೆ. 30ರಂದು ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ತಿಳಿಸಿದರು.
ಡಿ.7 ಮತ್ತು 11 ಮೊದಲನೇಮತ್ತು ಎರಡನೇ ಹಂತದ ಅಧಿಸೂಚನೆ ಹೊರಡಿಸಲಾಗುವುದು. 22 ಮತ್ತು 27 ಮತದಾನ ಮತದಾನ ಅವಶ್ಯವಿದ್ದರೆ ಮತದಾನ ನಡೆಸಬೇಕಾದ ದಿನಾಂಕ(ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ). ಮರು ಮತದಾನ ಇದ್ದಲ್ಲಿ 24, 29 ರಂದು ಮತದಾನದ ದಿನ(ಬೆಳಗ್ಗೆ 7 ರಿಂದ ಸಂಜೆ 5 ಗಂಟೆವರೆಗೆ) ನಡೆಯಲಿದೆ. 30 ರಂದು ತಾಲೂಕು ಕೇಂದ್ರಗಳಲ್ಲಿ ಬೆಳಗ್ಗೆ 8 ರಿಂದ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು.
ಮೊದಲನೇ ಹಂತದಲ್ಲಿ ದಾವಣಗೆರೆಯ 38, ಹೊನ್ನಾಳಿಯ 29, ಜಗಳೂರು 22, ಹರಿಹರದ24, ಚನ್ನಗಿರಿಯ 61, ನ್ಯಾಮತಿಯ 17 ಚುನಾವಣೆ ನಡೆಯಲಿದೆ ಎಂದು ತಿಳಿಸಿದರು. ಚುನಾವಣೆ ಸುಗಮವಾಗಿ ನಡೆಯಲು ಪ್ರತಿ ತಾಲೂಕಿಗೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ನೇಮಿಸಲಾಗಿದೆ ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಕಲ್ಪಿಸಲಾಗುತ್ತದೆ.ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯನಡೆಸಲಾಗುತ್ತಿದ್ದು, ಈವರಗೆ 8,37,727ಮತದಾರರು ನೋಂದಾಯಿಸಿಕೊಂಡಿರುತ್ತಾರೆ ಎಂದು ತಿಳಿಸಿದರು.
ಜಿಲ್ಲಾ ರಕ್ಷಣಾಧಿಕಾರಿ ಹನುಮಂತರಾಯ ಮಾತನಾಡಿ, ಜಿಲ್ಲೆಯ ಮತಗಟ್ಟೆಗಳಲ್ಲಿ 191ಸೂಕ್ಷ್ಮ ಹಾಗೂ 136 ಅತಿಸೂಕ್ಷ್ಮಮತಗಟ್ಟೆಗಳಿದ್ದು ಸೂಕ್ತ ಬಂದೋಬಸ್ತ್ ಮಾಡಲಾಗುತ್ತದೆ.ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆನೋಡಿಕೊಳ್ಳಲಾಗುವುದು. ಡಿಎಆರ್ ಮತ್ತು ಕೆಎಸ್‌ಆರ್‌ಪಿ ತುಕಡಿಗಳನ್ನು ಬಳಸಿಕೊಳ್ಳಲಾಗುವುದು ಎಂದು ಮಾಹಿತಿ ನೀಡಿದರು.
ಗುಂಪು ಪ್ರಚಾರವಿಲ್ಲ : ಕೋವಿಡ್ ಮುಂಜಾಗ್ರತಾ ಕ್ರಮವಾಗಿಚುನಾವಣಾ ಕಾರ್ಯದಲ್ಲಿಭಾಗವಹಿಸುವವರು ಪ್ರಚಾರದ ಸಂದರ್ಭದಲ್ಲಿ ಅಭ್ಯರ್ಥಿಗಳು ಮತ್ತು ಅವರ ಬೆಂಬಲಿಗರು ಕಡ್ಡಾಯವಾಗಿ ಫೇಸ್ ಮಾಸ್ಕ್ ಧರಿಸುವುದು. ಎಲೆಕ್ಟ್ರಾನಿಕ್‌ಮೀಡಿಯಾದಲ್ಲಿ ಚುನಾವಣಾ ಪ್ರಚಾರಮಾಡುವುದು ಒಳಿತು. ಕೋವಿಡ್‌ಪಾಸಿಟಿವ್ ಇರುವ ಅಭ್ಯರ್ಥಿಗಳು ಎಲಕ್ಟ್ರಾನಿಕ್ ಮಾಧ್ಯಮದಲ್ಲಿ ಪ್ರಚಾರ ಮಾಡಬಹುದಾಗಿದೆ. ಖುದ್ದಾಗಿ ಸಾಮಾನ್ಯ ಜನರೊಂದಿಗೆ, ಸಮುದಾಯದಲ್ಲಿ ಪ್ರಚಾರ ಮಾಡಲು ಅವಕಾಶವಿಲ್ಲ. ಹಾಗೂಕೋವಿಡ್-19 ಹಿನ್ನೆಲೆಯಲ್ಲಿ ಗುಂಪಾಗಿಪ್ರಚಾರ ಮಾಡುವಂತಿಲ್ಲ ಕೋವಿಡ್‌ಮುಂಜಾಗ್ರತಾ ಕ್ರಮಗಳೊಂದಿಗೆ ಕೋವಿಡ್ ಶಂಕಿತರು ಮತ್ತು ಸೋಂಕಿತರಿಗೆ ಮತದಾನದ ಕೊನೆಯ 1 ಗಂಟೆ ಮತದಾನಕ್ಕೆ ಅವಕಾಶ ಒದಗಿಸಲಾಗಿದೆ.
-ಮಹಾಂತೇಶ್ ಜಿ. ಬೀಳಗಿ, ಜಿಲ್ಲಾಧಿಕಾರಿ.