Advertisement

ದೇವದಾರಿ ಗಣಿಗಾರಿಕೆಗೆ ಪರಿಶೀಲಿಸಿ ಕ್ರಮ: ಸಿಎಂ

10:17 PM Jun 20, 2024 | Team Udayavani |

ಬಳ್ಳಾರಿ: ಸಂಡೂರಿನ ದೇವದಾರಿ ಗಣಿಗಾರಿಕೆಗೆ ಮೊದಲು ವಿರೋಧಿಸಿದ್ದ ಕೇಂದ್ರ ಸಚಿವ ಕುಮಾರಸ್ವಾಮಿ ಈಗ ಸಹಿ ಹಾಕಿದ್ದಾರೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Advertisement

ಸುದ್ದಿಗಾರರ ಜತೆ ಮಾತನಾಡಿದ ಅವರು, ಸಂಡೂರಿನಲ್ಲಿ ಗಣಿಗಾರಿಕೆ ಮಾಡಲು ಪರಿಸರ ಪ್ರೇಮಿಗಳು ವಿರೋಧ ಮಾಡುತ್ತಿದ್ದಾರೆ. ಒಂದು ಕಾಲದಲ್ಲಿ ಕುಮಾರಸ್ವಾಮಿ ಅವರೇ ವಿರೋಧಿಸಿ ಈಗ ಅವರೇ ಗಣಿಗಾರಿಕೆ ಮಾಡಿ ಎನ್ನುತ್ತಿದ್ದಾರೆ. ಈ ಬಗ್ಗೆ  ಪರಿಶೀಲಿಸಲಾಗುವುದು. ವಿಜಯನಗರ ಬಳ್ಳಾರಿ ಜಿಲ್ಲೆಯ ಕೆಲ ಶಾಸಕರ ಗಣಿಗಾರಿಕೆಯನ್ನು ಸ್ವಾಗತಿಸಿದ್ದಾರೆ. ಈ ಬಗ್ಗೆ ಕೂಡ ಪರಿಶೀಲಿಸಲಾಗುವುದು ಎಂದರು.

Advertisement

Udayavani is now on Telegram. Click here to join our channel and stay updated with the latest news.

Next